ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಮಾರಸ್ವಾಮಿ ಆಣೆ ಮಾಡಲಿ: ಸಚಿವ ಚಲುವರಾಯಸ್ವಾಮಿ ಸವಾಲು

Published 28 ಅಕ್ಟೋಬರ್ 2023, 18:44 IST
Last Updated 28 ಅಕ್ಟೋಬರ್ 2023, 18:44 IST
ಅಕ್ಷರ ಗಾತ್ರ

ಮಂಡ್ಯ: ‘ಕಾಂಗ್ರೆಸ್‌– ಜೆಡಿಎಸ್‌ ಸಮ್ಮಿಶ್ರ ಸರ್ಕಾರದಲ್ಲಿ 14 ತಿಂಗಳು ಮುಖ್ಯಮಂತ್ರಿಯಾಗಿದ್ದ ಎಚ್‌.ಡಿ.ಕುಮಾರಸ್ವಾಮಿ ಭ್ರಷ್ಟಾಚಾರ ಮಾಡಿಲ್ಲವೇ? ಇಲ್ಲ ಎನ್ನುವುದಾದರೆ ದೇವರ ಮುಂದೆ ಆಣೆ ಮಾಡಲಿ’ ಎಂದು ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ಸವಾಲು ಹಾಕಿದರು.

ಇಲ್ಲಿ ಸುದ್ದಿಗಾರರೊಂದಿಗೆ ಶನಿವಾರ ಮಾತನಾಡಿದ ಅವರು, ‘ತಾನು ಮುಖ್ಯಮಂತ್ರಿಯಾಗಿದ್ದಾಗ ವರ್ಗಾವಣೆಯಲ್ಲಿ ಹಸ್ತಕ್ಷೇಪ ಮಾಡಿಯೇ ಇಲ್ಲ ಎಂದು ಅವರು ಪ್ರಮಾಣ ಮಾಡಲಿ. ಧರ್ಮಸ್ಥಳ ಸೇರಿದಂತೆ ಯಾವುದೇ ದೇವಾಲಯಕ್ಕೆ ಬರಲಿ, ನಾವೂ ಪ್ರಮಾಣಕ್ಕೆ ಸಿದ್ಧರಿದ್ದೇವೆ. ಕುಮಾರಸ್ವಾಮಿಗೆ ಬೇರೆ ಕೆಲಸವಿಲ್ಲ; ಹೀಗಾಗಿ ಬೇಡದ ವಿಚಾರಗಳನ್ನು ಮಾತನಾಡುತ್ತಿದ್ದಾರೆ’ ಎಂದರು.

‘ಮುಖ್ಯಮಂತ್ರಿಯಾಗಲು ಸಮರ್ಥರಾದವರು ಕಾಂಗ್ರೆಸ್‌ನಲ್ಲಿ 50 ಮಂದಿ ಇದ್ದಾರೆ. ಸಮಯ ಬಂದಾಗ ಹೈಕಮಾಂಡ್‌ ತೀರ್ಮಾನಿಸುತ್ತದೆ. ಈಗ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಬಹಳ ಗಂಭೀರವಾಗಿ ಅವರು ಕೆಲಸ ಮಾಡುತ್ತಿದ್ದಾರೆ’ ಎಂದು ಹೇಳಿದರು.

‘ವಿಧಾನಸಭೆ ಚುನಾವಣೆಯಲ್ಲಿ ಸೋತ ನಂತರ ಜೆಡಿಎಸ್‌–ಬಿಜೆಪಿ ಮುಖಂಡರಲ್ಲಿ ಅಸಮಾಧಾನ ಜಾಸ್ತಿಯಾಗಿದೆ. ಹೀಗಾಗಿ ಆಪರೇಷನ್‌ ವಿಚಾರ ತೆಗೆದು ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ. ನನ್ನ ವಿರುದ್ಧ ಜಾರಿ ನಿರ್ದೇಶನಾಲಯದಿಂದ ದಾಳಿ ಮಾಡುವಂತೆ ಹಲವು ಮೂಗರ್ಜಿಗಳು ಹೋಗಿವೆ. ಏನೇ ಬಂದರೂ ಅದನ್ನು ಎದುರಿಸಲು ಸಿದ್ಧನಾಗಿದ್ದೇನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT