ಮಂಡ್ಯ: ‘ಕೆರೆ ಕಟ್ಟೆಗಳು ರೈತರ ಜೀವನಾಡಿ, ಕೆರೆಗಳು ತುಂಬಿದರೆ ರೈತರು ತಮ್ಮ ಕೃಷಿ ಪದ್ಧತಿಗಳನ್ನು ನಡೆಸಲು ಅನುಕೂಲವಾಗುತ್ತದೆ’ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ಅನ್ಬುಕುಮಾರ್ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಕಾವೇರಿ ಸಭಾಂಗಣದಲ್ಲಿ ಶನಿವಾರ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು. ಕೆರೆಗಳ ಸುತ್ತ ಒತ್ತುವರಿ ತೆರವುಗೊಳಿಸಿದ ನಂತರ ಅದರ ಸುತ್ತ ಗಿಡಗಳನ್ನು ನೆಡಿ, ಪಕ್ಷಿಗಳು ಗೂಡು ಕಟ್ಟಿ ಆಹಾರ ಪಡೆಯುವ ಗಿಡಗಳನ್ನು ನೆಟ್ಟಿ ಬಳಸಿ ಎಂದರು.

ಉತ್ತಮ ಮಳೆಯ ಹಿನ್ನೆಲೆಯಲ್ಲಿ ಬಿತ್ತನೆ ಕೂಡ ಚೆನ್ನಾಗಿದೆ. ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಕೊರತೆಯಾಗದಂತೆ ನೋಡಿಕೊಳ್ಳಿ. ಜಿಲ್ಲೆಯಲ್ಲಿ ಕೃಷಿ ಸರ್ವೆ ನಡೆಸಲು ಯಾವುದೇ ತೊಂದರೆಗಳಿಲ್ಲ. ಬೆಳೆ ಸರ್ವೆ ಶೇ 100ರಷ್ಟು ಆಗಬೇಕು ಎಂದರು.

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಯಾವುದೇ ತೊಂದರೆಯಾಗದಂತೆ ಅನುಷ್ಠಾನಗೊಳ್ಳಬೇಕು. ಈ ಯೋಜನೆಯ ಕಾಮಗಾರಿಯ ನಿರಂತರ ಪರಿಶೀಲನೆಗೆ ಅಧಿಕಾರಿಗಳನ್ನು ನಿಯೋಜಿಸಿ. ಕುಡಿಯುವ ನೀರು ಎಲ್ಲೂ ಕಲುಷಿತವಾಗದಂತೆ ನೋಡಿಕೊಳ್ಳಬೇಕು ಎಂದರು.

ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶವನ್ನು ಉತ್ತಮಪಡಿಸಲು ಯೋಜನೆ ರೂಪಿಸಿ. ವಿದ್ಯಾರ್ಥಿಗಳ ಬಗ್ಗೆ ಹೆಚ್ಚಿನ ನಿಗಾವಹಿಸಿ ಆತ್ಮವಿಶ್ವಾಸದೊಂದಿಗೆ ಪರೀಕ್ಷೆ ಎದುರಿಸಲು ಸಜ್ಜುಗೊಳಿಸಿ ಎಂದರು.

ವಸತಿ ಯೋಜನೆಗೆ ಸಂಬಂಧಿಸಿದಂತೆ ರಾಜೀವ್ ಗಂಧಿ ವಸತಿ ಯೋಜನೆಯಡಿ ಅನುದಾನ ಲಭ್ಯವಿದ್ದು, ಪ್ರಗತಿಯಾಗಬೇಕಿದೆ. ಕಡಿಮೆ ಸಾಧನೆ ಮಾಡಿರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಪಟ್ಟಿ ಮಾಡಿಕೊಂಡು ಪ್ರತಿ ದಿನ ಆನ್ ಲೈನ್ ಸಭೆ ನಡೆಸಿ ನಿಗದಿತ ಗುರಿ ಸಾಧಿಸುವಂತೆ ಮಾಡಿ ಎಂದರು.

ಜಿಲ್ಲಾಧಿಕಾರಿ ಕುಮಾರ ಅವರು ಲ್ಯಾಂಡ್ ಬೀಟ್, ಆಧಾರ್ ಸೀಡಿಂಗ್, ಬಗರ್ ಹುಕಂ, ಗೃಹಲಕ್ಷ್ಮಿ , ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ ಹಾಗೂ ತಹಶೀಲ್ದಾರ್ ಕೋಟ್೯ಗಳಲ್ಲಿ ಬಾಕಿ ಇರುವ ಪ್ರಕರಣಗಳು ಹಾಗೂ ಇತರೆ ಯೋಜನೆಯ ಸಾಧನೆಗಳ ಬಗ್ಗೆ ಮಾಹಿತಿ ನೀಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ಅವರು ನರೇಗಾ, ಸ್ವಚ್ಛ ಭಾರತ್ ಮಿಷನ್, ಬಹುಗ್ರಾಮ ಕುಡಿಯುವ ನೀರು, ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಜಿಲ್ಲಾಧಿಕಾರಿ ಎಚ್.ಎಲ್. ನಾಗರಾಜು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.