ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಟಿಪಿಎಲ್‌: 14 ರಸ್ತೆಗಳ ಅಭಿವೃದ್ಧಿಗೆ ಡಿಪಿಆರ್‌

Last Updated 26 ಫೆಬ್ರುವರಿ 2018, 19:30 IST
ಅಕ್ಷರ ಗಾತ್ರ

ಬೆಂಗಳೂರು: ವಾಹನ ದಟ್ಟಣೆ ಸಮಸ್ಯೆಯನ್ನು ನಿವಾರಿಸಲು ಐಟಿಪಿಎಲ್‌ಗೆ ಪರ್ಯಾಯ ಸಂಪರ್ಕ ಕಲ್ಪಿಸುವ 14 ರಸ್ತೆಗಳನ್ನು ಅಭಿವೃದ್ಧಿ ಪಡಿಸಲು ಸಮಗ್ರ ಯೋಜನಾ ವರದಿಯನ್ನು (ಡಿಪಿಆರ್‌) ಬಿಬಿಎಂಪಿ ಸಿದ್ಧಪಡಿಸುತ್ತಿದೆ.

ಈ ಕುರಿತು ರಾಜ್ಯ ಬಜೆಟ್‌ನಲ್ಲಿ ಘೋಷಿಸಲಾಗಿತ್ತು. ಇದಕ್ಕಾಗಿ 43 ಕಿ.ಮೀ. ಉದ್ದದ 14 ರಸ್ತೆಗಳನ್ನು ಬಿಬಿಎಂಪಿ ಗುರುತಿಸಿದೆ. ಏಪ್ರಿಲ್‌ ಬಳಿಕ ಕಾಮಗಾರಿ ಆರಂಭವಾಗುವ ನಿರೀಕ್ಷೆ ಇದೆ.

ಮೆಟ್ರೊ ಕಾಮಗಾರಿಯಿಂದಾಗಿ ವೈಟ್‌ಫೀಲ್ಡ್‌ ಭಾಗದಲ್ಲಿ ವಾಹನ ದಟ್ಟಣೆ ತೀವ್ರವಾಗಿದೆ. ಹೀಗಾಗಿ, ಕಿರಿದಾದ ರಸ್ತೆಗಳನ್ನು ವಿಸ್ತರಿಸಲಾಗುತ್ತದೆ. ಪಾದಚಾರಿ ಮಾರ್ಗ, ಒಳಚರಂಡಿ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದು ಬಿಬಿಎಂಪಿ ಅಧಿಕಾರಿಯೊಬ್ಬರು ತಿಳಿಸಿದರು.

150 ಕಿ.ಮೀ ಉದ್ದದ ಹೊರ ವರ್ತುಲ ರಸ್ತೆಯನ್ನು ಅಭಿವೃದ್ಧಿಪಡಿಸಬೇಕು ಎಂದು ಹೊರವರ್ತುಲ ರಸ್ತೆಯ ಕಂಪನಿಗಳ ಅಸೋಸಿಯೇಷನ್‌ನ ಸದಸ್ಯರು 2017ರ ಅಕ್ಟೋಬರ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮಹೇಂದ್ರ ಜೈನ್‌ ಅವರಿಗೆ ಮನವಿ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT