ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

20ಕ್ಕೂ ಅಧಿಕ ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು: ಶಾಸಕ ನರೇಂದ್ರಸ್ವಾಮಿ ವಿಶ್ವಾಸ

Published 26 ಏಪ್ರಿಲ್ 2024, 13:41 IST
Last Updated 26 ಏಪ್ರಿಲ್ 2024, 13:41 IST
ಅಕ್ಷರ ಗಾತ್ರ

ಬೆಳಕವಾಡಿ: ‘ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ 20ಕ್ಕೂ ಅಧಿಕ ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ’ ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

ಮಳವಳ್ಳಿ ತಾಲ್ಲೂಕಿನ ಬೊಪ್ಪೇಗೌಡನಪುರ(ಬಿಜಿಪುರ) ಹೋಬಳಿಯ ಪೂರಿಗಾಲಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ 248ರಲ್ಲಿ ಕುಟುಂಬ ಸದಸ್ಯರೊಂದಿಗೆ ಸರದಿ ಸಾಲಿನಲ್ಲಿ ತೆರಳಿ ಮತದಾನ ಮಾಡಿ ಅವರು ಮಾತನಾಡಿದರು.

‘ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ಮತದಾರರ ಬೆಂಬಲ ಹಾಗೂ ಜನರ ಅಭಿಪ್ರಾಯ ಗಮನಿಸಿದಾಗ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಗೆಲುವು ಸಾಧಿಸಿ ಸಂಸದರಾಗುವುದು ಖಚಿತವಾಗಿದೆ. ಈ ಬಾರಿಯ ಚುನಾವಣೆಯಲ್ಲಿ ರಾಜ್ಯದಲ್ಲಿ 20ಕ್ಕೂ ಹೆಚ್ಚು ಸ್ಥಾನಗಳನ್ನು ಕಾಂಗ್ರೆಸ್ ಗೆಲ್ಲಲಿದೆ. ಮತದಾನ ನಡೆಯುತ್ತಿರುವ ಮೊದಲ ಹಂತದಲ್ಲಿ 12 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT