ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭೆ ಚುನಾವಣೆ | ಮೈತ್ರಿ ಅಭ್ಯರ್ಥಿ ಬೆಂಬಲಿಸಿ: ನಿಖಿಲ್ ಕುಮಾರಸ್ವಾಮಿ

Published 14 ಏಪ್ರಿಲ್ 2024, 13:55 IST
Last Updated 14 ಏಪ್ರಿಲ್ 2024, 13:55 IST
ಅಕ್ಷರ ಗಾತ್ರ

ಮಳವಳ್ಳಿ: ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಅವರ ಪರವಾಗಿ ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವಿವಿಧೆಡೆ ಪ್ರಚಾರ ನಡೆಸಿದರು.

ತಾಲ್ಲೂಕಿನ ಕಿರುಗಾವಲು ಸಂತೆಮಾಳ, ಕಿರುಗಾವಲು, ಮಿಕ್ಕೆರೆ, ಅಣಸಾಲೆ, ಭೀಮನಹಳ್ಳಿ, ಹಿಟ್ಟನಹಳ್ಳಿಕೊಪ್ಪಲು, ಮುದ್ದೇಗೌಡನದೊಡ್ಡಿ, ದುಗ್ಗನಹಳ್ಳಿ, ಹಂಚೀಪುರ, ತಳಗವಾದಿ ಗ್ರಾಮಗಳಲ್ಲಿ ಪ್ರಚಾರ ನಡೆಸಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಬೆಂಬಲಿಸುವಂತೆ  ಮನವಿ ಮಾಡಿದರು. ಜೆಡಿಎಸ್-ಬಿಜೆಪಿ ಕಾರ್ಯಕರ್ತರು ಬೃಹತ್ ಹೂವಿನ ಹಾರ ಹಾಕಿ ಅವರನ್ನು ಸ್ವಾಗತಿಸಿದರು.

‘ಎಚ್.ಡಿ.ಕುಮಾರಸ್ವಾಮಿ ಅವರು ರೈತರ ಉಳಿವಿಗೆ ಹಾಗೂ ಅಭಿವೃದ್ಧಿಗಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಬಿಜೆಪಿ ರಾಷ್ಟ್ರೀಯ ನಾಯಕರು ಕೇಂದ್ರದಲ್ಲಿ ನಿಮ್ಮ ಸೇವೆ ಅವಶ್ಯಕತೆ ಇದೆ. ಮಂಡ್ಯದಲ್ಲಿ ನೀವೇ ಸ್ಪರ್ಧಿಸಬೇಕು ಎಂದಿದ್ದಕ್ಕೆ , ಜನರ ಒತ್ತಾಯದಂತೆ ಸ್ಪರ್ಧಿಸಿದ್ದಾರೆ.  ಗೆದ್ದರೆ ರಾಜ್ಯದ ದೊಡ್ಡ ಶಕ್ತಿಯಾಗಿ ರೂಪುಗೊಳ್ಳುತ್ತಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.   ಏ. 16ರಿಂದ 24ರವರೆಗೆ ಜಿಲ್ಲೆಯ ವಿವಿಧೆಡೆ ಕುಮಾರ ಸ್ವಾಮಿಪ್ರಚಾರ ಮಾಡಲಿದ್ದಾರೆ. ಜನರ ಪ್ರೀತಿ ಹಾಗೂ ದೇವರ ಕೃಪೆಯಿಂದ ಅವರ ಆರೋಗ್ಯ ಚೆನ್ನಾಗಿದೆ ಎಂದು ಹೇಳಿದರು.

ಜೆಡಿಎಸ್ ಎಸ್ಸಿ ವಿಭಾಗದ ರಾಜ್ಯ ಘಟಕದ ಅಧ್ಯಕ್ಷ ಕೆ.ಅನ್ನದಾನಿ ಮಾತನಾಡಿ, ಜಿಲ್ಲೆಯ ಅಭಿವೃದ್ಧಿಗೆ ಎಚ್.ಡಿ.ಕುಮಾರಸ್ವಾಮಿ ಅವರ ಅವಶ್ಯಕತೆ ಇದೆ ಎಂದರು.ಜೆಡಿಎಸ್ ಜಿಲ್ಲಾ ಯುವ ಘಟಕದ ಅಧ್ಯಕ್ಷ ಬಿ.ರವಿ ಕಂಸಾಗರ ಮಾತನಾಡಿ, ಎಚ್.ಡಿ.ಕುಮಾರಸ್ವಾಮಿ ಅವರ ಸ್ಪರ್ಧೆ ಜಿಲ್ಲೆಯ ರೈತರು ಹಾಗೂ ಯುವಕರಲ್ಲಿ ಹೊಸ ಉತ್ಸಾಹ ತಂದಿದೆ ಎಂದು ಹೇಳಿದರು.

ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಘಟಕದ ಉಪಾಧ್ಯಕ್ಷ ಜಿ.ಮುನಿರಾಜು, ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ವಿ.ಎಂ.ವಿಶ್ವನಾಥ್ ಹಾಗೂ ವಿವಿಧ ಗ್ರಾಮಗಳ ಮುಖಂಡರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT