ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭೆ ಚುನಾವಣೆ | ಚುಂಚಶ್ರೀ ಆಶೀರ್ವಾದ ಪಡೆದು ಪ್ರಚಾರ; ಸುಮಲತಾ

Published 29 ಫೆಬ್ರುವರಿ 2024, 15:24 IST
Last Updated 29 ಫೆಬ್ರುವರಿ 2024, 15:24 IST
ಅಕ್ಷರ ಗಾತ್ರ

ಮಂಡ್ಯ: ‘ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಟಿಕೆಟ್‌ ದೊರೆಯುವ ವಿಶ್ವಾಸವಿದ್ದು, ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿಯ ಆಶೀರ್ವಾದ ಪಡೆದು, ತಾಲ್ಲೂಕು ಕೇಂದ್ರಗಳಿಂದ ಪ್ರಚಾರ ಆರಂಭಿಸುವೆ’ ಎಂದು ಸಂಸದೆ ಸುಮಲತಾ ಗುರುವಾರ ಹೇಳಿದರು.

ಸುದ್ದಿಗಾರರೊಂದಿಗೆ ‌‌‌‌ಮಾತನಾಡಿ, ‘ಕಳೆದ ಚುನಾವಣೆಯಲ್ಲಿ ‌ಸ್ವತಂತ್ರ ಅಭ್ಯರ್ಥಿಯಾಗಿದ್ದೆ, ಈ ಬಾರಿ ಪರಿಸ್ಥಿತಿ ಬದಲಾಗಿದ್ದು, ಪಕ್ಷದ ವರಿಷ್ಠರ ಸಲಹೆ, ಸೂಚನೆಯಂತೆ ನಡೆದುಕೊಳ್ಳುವೆ. ಪ್ರತಿ ತಾಲ್ಲೂಕಿನಲ್ಲೂ ಬೆಂಬಲಿಗರ ಸಭೆ ನಡೆಸುವೆ. ಚುನಾವಣೆ ದಿನಾಂಕ ಘೋಷಣೆಯಾಗುವ ಮೊದಲೇ ಒಂದು ಸುತ್ತಿನ ಪ್ರವಾಸವನ್ನೂ ಪೂರ್ಣಗೊಳಿಸುವೆ’ ಎಂದರು.

‘ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಎಲ್ಲವನ್ನೂ ಸ್ಪಷ್ಟಪಡಿಸಿದ್ದೇನೆ. ಸಮಾಧಾನದಿಂದ ಇರುವಂತೆ ಬೆಂಬಲಿಗರಿಗೆ ತಿಳಿಸಿದ್ದೇನೆ. ಜಿಲ್ಲೆಯಾದ್ಯಂತ ಪ್ರವಾಸ ಮಾಡಿ, ಐದು ವರ್ಷಗಳಲ್ಲಿ ಮಾಡಿರುವ ಕೆಲಸಗಳನ್ನು ಜನರ ಮುಂದಿಡುವೆ’ ಎಂದರು.

‘ಎಚ್‌.ಡಿ.ಕುಮಾರಸ್ವಾಮಿಯವರನ್ನು ಯಾವತ್ತೂ ದ್ವೇಷಿಸಿಲ್ಲ. ವೈಯಕ್ತಿಕವಾಗಿ ಯಾರನ್ನೂ ಟೀಕಿಸುವುದೂ ಇಲ್ಲ. ನನ್ನೆಲ್ಲಾ ಹೇಳಿಕೆಗಳ ರೆಕಾರ್ಡಿಂಗ್‌ ತೆರೆದು ನೋಡಿ, ಯಾರ ವಿರುದ್ಧವೂ ನಾನು ಕೆಟ್ಟದಾಗಿ ಮಾತನಾಡಿಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT