ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭಾ ಚುನಾವಣೆ | ಕನಿಷ್ಠ 20 ಕ್ಷೇತ್ರ ಗೆಲ್ಲುತ್ತೇವೆ: ಸಿಎಂ ಸಿದ್ದರಾಮಯ್ಯ

Published 18 ಫೆಬ್ರುವರಿ 2024, 7:31 IST
Last Updated 18 ಫೆಬ್ರುವರಿ 2024, 7:31 IST
ಅಕ್ಷರ ಗಾತ್ರ

ಮಂಡ್ಯ: 'ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಕನಿಷ್ಠ 20 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ವಿಶ್ವಾಸ ವ್ಯಕ್ತಪಡಿಸಿದರು.

ಮಳವಳ್ಳಿಯಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ, ಸರ್ಕಾರದ ಗ್ಯಾರಂಟಿ‌ ಯೋಜನೆಗಳ ಸಮಾವೇಶದಲ್ಲಿ ಪಾಲ್ಗೊಳ್ಳುವ ಮೊದಲು ಅವರು ಸುದ್ದಿಗಾರರ ಜೊತೆ ಮಾತನಾಡಿದರು.

'ಲೋಕಸಭಾ ಚುನಾವಣೆ‌ ಎದುರಿಸಲು ನಾವು‌ ಸಿದ್ಧರಾಗಿದ್ದೇವೆ. ಬಿಜೆಪಿ ಮುಖಂಡರು ಬರೀ ಬುರುಡೆ ಬಿಡುತ್ತಿದ್ದಾರೆ. ಬಿಜೆಪಿಯ ಸುಳ್ಳುಗಳನ್ನು ಜನ ನಂಬುವುದಿಲ್ಲ. ಜನ ಈ‌ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡ್ತಾರೆ' ಎಂದರು.

ಸಿಎಂ, ಡಿಸಿಎಂ ಕೂಡ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಲಿ ಎಂದು ಸಚಿವ ಮಹದೇವಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು 'ಸ್ಥಳೀಯ ಮಟ್ಟದಲ್ಲಿ ಯಾರಿಗೆ ಒಲವು ಇರುತ್ತೆ ಅವರು ಅಭ್ಯರ್ಥಿ ಆಗ್ತಾರೆ. ಸ್ಥಳೀಯರು ಯಾರ ಹೆಸರು ಹೇಳ್ತಾರೆ ಅವರಿಗೆ‌ ಟಿಕೆಟ್ ಕೊಡ್ತೀವಿ. ಮಹದೇವಪ್ಪ ಅವರ ಹೆಸರು ಹೇಳಿದರೆ ಮಹದೇವಪ್ಪಗೆ, ಬೇರೆಯವರ ಹೆಸರು ಹೇಳಿದ್ರೆ ಬೇರೆಯವರಿಗೆ ಕೊಡ್ತೀವಿ' ಎಂದರು.

ಮೈಸೂರಿನಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ನಟ ಡಾಲಿ ಧನಂಜಯ ಸ್ಪರ್ಧೆ ವಿಚಾರಕ್ಕೆ ಪ್ರತಿಕ್ರಿಯಿಸಿ 'ನನಗೆ ಆ ಬಗ್ಗೆ ಗೊತ್ತಿಲ್ಲ. ನಮ್ಮ ಪಕ್ಷದಲ್ಲಿ ಅದರ ಬಗ್ಗೆ ಚರ್ಚೆ ಆಗಿಲ್ಲ. ನನಗೆ ಗೊತ್ತೂ ಇಲ್ಲ, ಚರ್ಚೆನೂ ಇಲ್ಲ' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT