ಮಂಡ್ಯ: ಜಿಲ್ಲೆಯ ಏಳು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗಳು, ಡಿಎಚ್ಒ ಕಚೇರಿ ಹಾಗೂ ಕೆ.ಆರ್.ಪೇಟೆ ಪಟ್ಟಣದ ಎರಡು ಖಾಸಗಿ ಡಯಾಗ್ನಾಸ್ಟಿಕ್ ಸೆಂಟರ್ಗಳ ಮೇಲೆ ಶುಕ್ರವಾರ ಏಕಕಾಲಕ್ಕೆ 9 ಕಡೆ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿ, ಶೋಧ ಕಾರ್ಯ ನಡೆಸಿದರು.

ತಾಲ್ಲೂಕು ಆಸ್ಪತ್ರೆಗಳಲ್ಲಿ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಯಂತ್ರಗಳ ಬಳಕೆಯಾಗದೆ ದೂಳು ಹಿಡಿಯುತ್ತಿವೆ. ಸರ್ಕಾರಿ ವೈದ್ಯರು ಖಾಸಗಿ ಸಂಸ್ಥೆಗಳ ಜೊತೆ ಕೈಜೋಡಿಸಿ ಹೊರಗಡೆ ಸ್ಕ್ಯಾನಿಂಗ್ ಮಾಡಿಸಿಕೊಂಡು ಬರುವಂತೆ ಚೀಟಿ ಬರೆದುಕೊಡುತ್ತಿದ್ದಾರೆ ಎಂದು ಕೆ.ಆರ್.ಪೇಟೆಯ ಕೆ.ಎನ್. ಮಂಜುನಾಥ್ ಎಂಬುವವರು ಲೋಕಾಯುಕ್ತರಿಗೆ ದೂರು ಸಲ್ಲಿಸಿದ್ದರು.

ದೂರಿನ ಮೇರೆಗೆ, ಉಪಲೋಕಾಯುಕ್ತ ಬಿ.ವೀರಪ್ಪ ಅವರು ಶೋಧ ಕಾರ್ಯ ನಡೆಸಿ, ವರದಿ ನೀಡುವಂತೆ ಆದೇಶಿಸಿದ್ದರು. ಆದೇಶದ ಮೇರೆಗೆ ಮಂಡ್ಯ, ಮೈಸೂರು ಮತ್ತು ರಾಮನಗರ ಜಿಲ್ಲೆಯ ಲೋಕಾಯುಕ್ತ ಪೊಲೀಸರು 9 ತಂಡಗಳನ್ನು ರಚಿಸಿಕೊಂಡು ಏಕಕಾಲಕ್ಕೆ ದಾಳಿ ನಡೆಸಿದರು.

ಖಾಸಗಿ ಸ್ಕ್ಯಾನಿಂಗ್ ಸೆಂಟರ್ನಲ್ಲಿ ಭ್ರೂಣಲಿಂಗ ಪತ್ತೆ, 18 ವರ್ಷದೊಳಗಿನವರು (ಬಾಲಕಿಯರು) ಸ್ಕ್ಯಾನಿಂಗ್ಗೆ ಬಂದರೂ ಮಾಹಿತಿ ಕೊಡದಿರುವುದು ಸೇರಿದಂತೆ ಹಲವಾರು ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾ ಲೋಕಾಯುಕ್ತ ಎಸ್ಪಿ ಲೋಕೇಶ್ ಬಾಬು ನೇತೃತ್ವದಲ್ಲಿ ನಾಗಮಂಗಲ, ಕೆ.ಆರ್.ಪೇಟೆ, ಪಾಂಡವಪುರ, ಮದ್ದೂರು, ಮಳವಳ್ಳಿ, ಶ್ರೀರಂಗಪಟ್ಟಣದಲ್ಲಿರುವ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಬೆಳಿಗ್ಗೆ 11ರಿಂದ ಆರಂಭವಾದ ಶೋಧ ಕಾರ್ಯ ತಡೆರಾತ್ರಿವರೆಗೂ ನಡೆಯಿತು.

‘ಆಸ್ಪತ್ರೆಗಳಲ್ಲಿ ಕಡತ, ದಾಖಲೆಗಳನ್ನು ಪರಿಶೀಲಿಸಿ, ಕಂಡುಬಂದ ನ್ಯೂನತೆಗಳನ್ನು ಪಟ್ಟಿ ಮಾಡಲಾಗುತ್ತಿದೆ. ಸಮಗ್ರ ವರದಿ ತಯಾರಿಸಿ ಉಪಲೋಕಾಯುಕ್ತರಿಗೆ ಸಲ್ಲಿಸಲಾಗುವುದು’ ಎಂದು ಲೋಕಾಯುಕ್ತ ಪೊಲೀಸರು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.