ಭಾರತಿನಗರ (ಮಂಡ್ಯ ಜಿಲ್ಲೆ): ಮಂಡ್ಯ ನಗರಸಭೆಯ ಸಮುದಾಯ ಸಂಘಟನಾಧಿಕಾರಿ ತೊರೆಚಾಕನಹಳ್ಳಿ ಪುಟ್ಟಸ್ವಾಮಿ ಅವರಿಗೆ ಸೇರಿದ ಮೂರು ಮನೆಗಳ ಮೇಲೆ ಏಕಕಾಲಕ್ಕೆ ಮಂಗಳವಾರ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಕಡತ ಪರಿಶೀಲನೆ ನಡೆಸಿದ್ದಾರೆ.

ಸಿ.ಪುಟ್ಟಸ್ವಾಮಿ ಅವರಿಗೆ ಸೇರಿದ ಮಂಡ್ಯದಲ್ಲಿನ ಮನೆ, ತೊರೆಚಾಕನಹಳ್ಳಿಯಲ್ಲಿನ ಮನೆ, ಸಂಬಂಧಿಕರ ಎರಡು ಮನೆಗಳು ಹಾಗೂ ಫಾರ್ಮ್ ಹೌಸ್, ಸೇರಿದಂತೆ ಐದು ಕಡೆ ಪ್ರತ್ಯೇಕ ತಂಡಗಳಾಗಿ ದಾಳಿ ನಡೆಸಲಾಗಿದೆ.

ಎಲ್ಲೆಡೆಯೂ ದಾಖಲೆಗಳ, ಪತ್ರಗಳನ್ನು ಪರಿಶೀಲನೆ ನಡೆಸಿದ್ದಾರೆ.

ರಾಜ್ಯಾದ್ಯಂತ ಹಲವು ಭ್ರಷ್ಟ ಅಧಿಕಾರಿಗಳ ಮನೆ ಮೇಲೆ ದಾಳಿಗಾಗಿ ನಿಯೋಜಿಸಲಾಗಿದ್ದ ಲೋಕಾಯುಕ್ತರ ಒಂದು ತಂಡ ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಪುಟ್ಟಸ್ವಾಮಿ ಅವರ ಮನೆ, ಕಚೇರಿ ಮೇಲೆ ದಾಳಿ ನಡೆಸಿದ್ದಾರೆ.

ಈ ಹಿಂದೆ ಈತ ಚನ್ನಪಟ್ಟಣ, ಮದ್ದೂರು ಸೇರಿ ಹಲವು ಕಡೆ ಪುರಸಭೆ ಮುಖ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಣೆ ಮಾಡಿದ್ದರು. ಇಲ್ಲಿಯೂ ಕೂಡ ಇವರ ಮೇಲೆ ಭ್ರಷ್ಟಾಚಾರದ ಆರೋಪ ಕೇಳಿ ಬಂದಿತ್ತೆಂದು ಮೂಲಗಳು ತಿಳಿಸಿವೆ.

ಲೋಕಾಯುಕ್ತ ಪೊಲೀಸ್ ಇನ್ ಸ್ಪೆಕ್ಟರ್ ಬ್ಯಾಟರಾಯಗೌಡ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದೆ.
.Lokayukta Raid: ಬೆಂಗಳೂರು ಸೇರಿ ರಾಜ್ಯದ 10 ಕಡೆಗಳಲ್ಲಿ ಲೋಕಾಯುಕ್ತ ದಾಳಿ.ಮಡಿಕೇರಿ: ಲೋಕೋಪಯೋಗಿ ಇಲಾಖೆಯ ಎಇಇ ಮನೆ ಮೇಲೆ ಲೋಕಾಯುಕ್ತ ದಾಳಿ.ಕರ್ನಾಟಕ ವಿಶ್ವವಿದ್ಯಾಲಯದ ಪ್ರೊ ಸುಭಾಷ್ ನಾಟಿಕರ್ ಮನೆಗೆ ಲೋಕಾಯುಕ್ತ ದಾಳಿ.ದಾವಣಗೆರೆ: ಎಪಿಎಂಸಿ ಸಹಾಯಕ ನಿರ್ದೇಶಕರ ಮನೆ ಮೇಲೆ ಲೋಕಾಯುಕ್ತ ದಾಳಿ.ಬೀದರ್: ಕೆಬಿಜೆಎನ್ಎಲ್ ಮುಖ್ಯ ಎಂಜಿನಿಯರ್ ಮನೆಯಲ್ಲಿ ಲೋಕಾಯುಕ್ತ ಪೊಲೀಸರ ಶೋಧ.ಶಿವಮೊಗ್ಗ: ಸಿಮ್ಸ್ ನಿರ್ದೇಶಕರ ಆಪ್ತ ಸಹಾಯಕನ ನಿವಾಸದ ಮೇಲೆ ಲೋಕಾಯುಕ್ತ ದಾಳಿ