ಮಂಗಳವಾರ, 16 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನಾಗಮಂಗಲ | ನಿವೃತ್ತ ಎಇಇ ಶಿವರಾಜು ಮನೆ ಮೇಲೆ ಲೋಕಾಯುಕ್ತ ದಾಳಿ

Published 11 ಜುಲೈ 2024, 9:00 IST
Last Updated 11 ಜುಲೈ 2024, 9:00 IST
ಅಕ್ಷರ ಗಾತ್ರ

ನಾಗಮಂಗಲ: ಆದಾಯಕ್ಕೂ ಮೀರಿ ಆಸ್ತಿ ಸಂಪಾದನೆ ಮಾಡಿದ್ದ ತಾಲ್ಲೂಕಿನ ಇಜ್ಜಲಘಟ್ಟ ಗ್ರಾಮದ ಗ್ರಾಮೀಣ ನೈರ್ಮಲ್ಯ ಮತ್ತು ಕುಡಿಯುವ ನೀರು ಇಲಾಖೆಯ ನಿವೃತ್ತ ಎಇಇ ಎಸ್. ಶಿವರಾಜು ಅವರ ಮನೆಗಳ ಮೇಲೆ ಏಕಕಾಲಕ್ಕೆ ಮೂರು ಕಡೆ ಗುರುವಾರ ಮಂಡ್ಯ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.

ಎಸ್.ಶಿವರಾಜು ಅವರ ಮೈಸೂರಿನ ನಿವಾಸ, ಇಜ್ಜಲಘಟ್ಟದಲ್ಲಿರುವ ತಂದೆಯ ಮನೆ ಮತ್ತು ಮೈಸೂರಿನ ಅವರ ಅಳಿಯನ ಮನೆಯಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಎಸ್‌.ಶಿವರಾಜು ಅವರು ಬೆಂಗಳೂರು, ಹೊಸಪೇಟೆ ಮತ್ತು ಮಂಡ್ಯ ಸೇರಿದಂತೆ ವಿವಿಧೆಡೆ ಕರ್ತವ್ಯ ನಿರ್ವಹಿಸಿ ಮೂರು ತಿಂಗಳ ಹಿಂದೆ ಕೆಲಸದಿಂದ ನಿವೃತ್ತಿಯಾಗಿದ್ದರು.

ಶಿವರಾಜು ಅವರು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರ ಸಂಬಂಧಿ ಮತ್ತು ಶಾಲಾ ಸಹಪಾಠಿ ಎನ್ನಲಾಗಿದೆ.

ಲೋಕಾಯುಕ್ತ ಎಸ್.ಪಿ.ಸುರೇಶ್ ಬಾಬು ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ತನಿಖೆ ಮುಂದುವರಿದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT