ಭಾನುವಾರ, 23 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಲಾರಿ ಡಿಕ್ಕಿ: ಪಾದಚಾರಿ ಮಹಿಳೆ ಸಾವು

Published 21 ಮೇ 2024, 13:29 IST
Last Updated 21 ಮೇ 2024, 13:29 IST
ಅಕ್ಷರ ಗಾತ್ರ

ಮಳವಳ್ಳಿ: ತಾಲ್ಲೂಕಿನ ರಾಗಿಬೊಮ್ಮನಹಳ್ಳಿ-ಹುಚ್ಚನದೊಡ್ಡಿ ಗೇಟ್ ಬಳಿ ಲಾರಿ ಡಿಕ್ಕಿಯಾಗಿ ಪಾದಚಾರಿ ಮಹಿಳೆ ತಿ.ನರಸೀಪುರ ತಾಲ್ಲೂಕಿನ ಬೆವಕನಹಳ್ಳಿ ಗ್ರಾಮದ ಪುಟ್ಟಸ್ವಾಮಿ ಎಂಬುವವರ ಪತ್ನಿ ರಾಜಮ್ಮ(50) ಮೃತಪಟ್ಟರು.

ಸಂಬಂಧಿಕರೊಬ್ಬರ ವಿವಾಹ ಕಾರ್ಯಕ್ರಮಕ್ಕೆ ಬಂದಿದ್ದ ರಾಜಮ್ಮ ರಾಗಿಬೊಮ್ಮನಹಳ್ಳಿ-ಹುಚ್ಚನದೊಡ್ಡಿ ಗೇಟ್ ರಸ್ತೆ ದಾಟುತ್ತಿದ್ದ ವೇಳೆ ಲಾರಿ ಡಿಕ್ಕಿ ಹೊಡೆದಿದೆ. ತೀವ್ರವಾಗಿ ಗಾಯಗೊಂಡಿದ್ದ ಅವರು ಆಸ್ಪತ್ರೆಗೆ ಸಾಗುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ. ಲಾರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT