ಮಂಡ್ಯ: ಎಂ.ಶ್ರೀನಿವಾಸ್ ಸಮಾಜಸೇವಾ ಪ್ರಶಸ್ತಿಯನ್ನು ಸಾಹಿತಿ ಎಸ್.ತುಕಾರಾಮ್ ಅವರಿಗೆ ಮತ್ತು ಅರಸಮ್ಮ ಮೆಣಸೇಗೌಡ ಕೃಷಿ ಪ್ರಶಸ್ತಿಯನ್ನು ಪ್ರಗತಿಪರ ರೈತ ಶಿವು ಬನ್ನಹಳ್ಳಿ ಅವರಿಗೆ ತಲಾ ₹25 ಸಾವಿರ ನಗದು ಹಾಗೂ ಫಲಕದೊಂದಿಗೆ ಪ್ರದಾನ ಮಾಡಿ ಗೌರವಿಸಲಾಯಿತು.

ನಗರದ ಅಂಬೇಡ್ಕರ್ ಭವನದಲ್ಲಿ ಸೋಮವಾರ ಹನಕೆರೆ ಎಂ.ಶ್ರೀನಿವಾಸ್ ಪ್ರತಿಷ್ಠಾನ, ಕರ್ನಾಟಕ ಸಂಘದ ಸಹಯೋಗದಲ್ಲಿ ಎಂ.ಶ್ರೀನಿವಾಸ್–75 ‘ಶ್ರೀನಿಧಿ’ ಎಂ.ಶ್ರೀನಿವಾಸ್ ಅಭಿನಂದನಾ ಗ್ರಂಥ ಬಿಡುಗಡೆ, ಅರಸಮ್ಮ ಮೆಣಸೇಗೌಡ ಕೃಷಿ ಪ್ರಶಸ್ತಿ, ಎಂ.ಶ್ರೀನಿವಾಸ್ ಸಮಾಜಸೇವಾ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.

ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಮಾತನಾಡಿ, ‘ಹೋರಾಟದ ಹಾದಿಯಲ್ಲಿ ಬಂದ ಎಂ.ಶ್ರೀನಿವಾಸ್ ಅವರು, ವಕೀಲರಾಗಿ, ಒಕ್ಕಲಿಗರ ಸಂಘದ ನಿರ್ದೇಶಕರಾಗಿ ರೈತ ಸಂಘದ ಚಟುವಟಿಕೆಯಲ್ಲಿ ತೊಡಗಿ, ಮೂರು ಬಾರಿ ಶಾಸಕರಾಗಿ ಜನಮನ್ನಣೆ ಗಳಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ನಮ್ಮ ಮಂಡ್ಯ ಜಿಲ್ಲೆಯ ಜನರನ್ನು ಅಷ್ಟು ಸುಲಭವಾಗಿ ಅರ್ಥ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ. ಮುಖ್ಯಮಂತ್ರಿ ಆಗುವವರೆನ್ನೇ ಸೋಲಿಸಿ ಮನೆಗೆ ಕಳುಹಿಸಿರುವ ಉದಾಹರಣೆಗಳು ಸಿಗುತ್ತವೆ. ಎಂ.ಶ್ರೀನಿವಾಸ್ ಅವರು ಜನರ ಪ್ರೀತಿಯನ್ನು ಶಾಸಕರ ಅವಧಿಯಲ್ಲಿ ಗಳಿಸಿದ್ದಾರೆ ಎಂದರು.

‘ಶ್ರೀನಿಧಿ’ ಅಭಿನಂದನಾ ಗ್ರಂಥ ಬಿಡುಗಡೆ ಮಾಡಿ ಮಾತನಾಡಿದ ಆಂಧ್ರಪ್ರದೇಶ ಮತ್ತು ತೆಲಂಗಾಣ ಆದಾಯ ತೆರಿಗೆ ಇಲಾಖೆ ಮುಖ್ಯ ಆಯುಕ್ತ ಜಯರಾಮ್ ರಾಯಪುರ, ‘ಎಂ.ಶ್ರೀನಿವಾಸ್ ಅವರು ರೈತ ಸಂಘದ ಚಳವಳಿ ಮೂಲಕ ರಾಜಕೀಯಕ್ಕೆ ಪದಾರ್ಪಣೆ ಮಾಡಿದರು. ಕೆ.ವಿ.ಶಂಕರೇಗೌಡ ಅವರಂತೆಯೇ ಕರ್ನಾಟಕ ಸಂಘ ಕಟ್ಟಲು ಎಂ.ಶ್ರೀನಿವಾಸ್ ಅವರು ಕೂಡ ಕಾರಣರಾಗಿದ್ಧಾರೆ. ಸಾಂಸ್ಕೃತಿಕ ಚಟುವಟಿಕೆಯಲ್ಲಿ ತಮ್ಮದೇ ಛಾಪು ಮೂಡಿಸುವ ನಿಟ್ಟಿನಲ್ಲಿ ಈ ಸಂಘವು ಸಾಗುತ್ತಿದೆ’ ಎಂದರು.

ಮಾಜಿ ಶಾಸಕ ಸಿ.ಎಸ್. ಪುಟ್ಟರಾಜು ಮಾತನಾಡಿದರು. ಶಾಸಕ ಪಿ.ರವಿಕುಮಾರ್ ಅವರು ಅಧ್ಯಕ್ಷತೆ ವಹಿಸಿದ್ದರು. ಎಸ್.ಶಿವರಾಮು, ಲೋಕೇಶ್ ಚಂದಗಾಲು ಸಂಪಾದಕತ್ವದ ‘ಶ್ರೀನಿಧಿ’ ಅಭಿನಂದನಾ ಗ್ರಂಥ ಬಿಡುಗಡೆ ಮಾಡಲಾಯಿತು. ಮಾಜಿ ಶಾಸಕ ಎಂ.ಶ್ರೀನಿವಾಸ್ ಅವರನ್ನು ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ಕೆಂಗೇರಿ ವಿಶ್ವ ಒಕ್ಕಲಿಗರ ಮಠದ ನಿಶ್ಚಲಾನಂದನಾಥ ಸ್ವಾಮೀಜಿ, ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡ, ವಿಧಾನ ಪರಿಷತ್ ಮಾಜಿ ಸದಸ್ಯ ಬಿ.ರಾಮಕೃಷ್ಣ, ಕೆ.ಟಿ. ಶ್ರೀಕಂಠೇಗೌಡ, ಮುಡಾ ಅಧ್ಯಕ್ಷ ಬಿ.ಪಿ. ಪ್ರಕಾಶ್, ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶಗೌಡ, ಪ್ರತಿಷ್ಠಾನದ ಅಧ್ಯಕ್ಷ ಶಿವರಾಜು ಕೀಲಾರ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.