ಮದ್ದೂರು: ರೈತರು ಕೃಷಿ ಇಲಾಖೆಯಿಂದ ಸಿಗುವ ಸವಲತ್ತುಗಳನ್ನು ಉಪಯೋಗಿಸಿಕೊಳ್ಳಬೇಕು ಎಂದು ಶಾಸಕ ಕೆ.ಎಂ. ಉದಯ್ ತಿಳಿಸಿದರು.
ತಾಲ್ಲೂಕಿನ ಹನುಮಂತಪುರದಲ್ಲಿ ಕೃಷಿ ಇಲಾಖೆ ಆಯೋಜಿಸಿದ್ದ ಮೇವು ಕಟಾವಿನ ಯಂತ್ರಗಳನ್ನು ರೈತರಿಗೆ ವಿತರಿಸುವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರೈತರು ರಾಸಾಯನಿಕ ಗೊಬ್ಬರಗಳನ್ನು ಬಳಸುವುದರಿಂದ ಮಣ್ಣಿನ ಫಲವತ್ತತೆ ಕಡಿಮೆಯಾಗುತ್ತಿದೆ. ಕೊಟ್ಟಿಗೆ ಗೊಬ್ಬರಗಳನ್ನು ಬೆಳೆಗಳಿಗೆ ಹಾಕುವುದರಿಂದ ಮಣ್ಣಿನ ಫಲವತ್ತತೆ ಹೆಚ್ಚಾಗುತ್ತದೆ ಎಂದರು. ನೀರಾವರಿ ಹಾಗೂ ಕೃಷಿ ಕ್ಷೇತ್ರದ ಅಭಿವೃದ್ಧಿಯೊಂದಿಗೆ ತಾಲ್ಲೂಕಿನ ರೈತರಿಗಾಘಿ ಯೋಜನೆಗಳನ್ನು ರೂಪಿಸಲಾಗುವುದು ಎಂದರು.
ಸಹಾಯಕ ಕೃಷಿ ನಿರ್ದೇಶಕರು ಪ್ರತಿಭಾ, ತಾಂತ್ರಿಕ ಅಧಿಕಾರಿ ದಯಾನಂದ, ಮುಖಂಡರಾದ ತೊರೆಶೆಟ್ಟಿಹಳ್ಳಿ ನಾಗೇಗೌಡ,ಕದಲೂರು ರವಿ, ತಿಮ್ಮೆಗೌಡ, ಆರ್ ಸಿ ಎಸ್ ಶಿವು ಭಾಗವಹಿಸಿದ್ದರು.