ಸೋಮವಾರ, 22 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮದ್ದೂರು ಕ್ಷೇತ್ರ: ಜೆಡಿಎಸ್‌ನತ್ತ ಎಸ್‌.ಎಂ.ಕೃಷ್ಣ ಅಣ್ಣನ ಮಗ ಗುರುಚರಣ್‌

Last Updated 19 ಏಪ್ರಿಲ್ 2023, 13:39 IST
ಅಕ್ಷರ ಗಾತ್ರ

ಮಂಡ್ಯ: ಮದ್ದೂರು ಕ್ಷೇತ್ರದಿಂದ ಕದಲೂರು ಉದಯ್‌ ಅವರಿಗೆ ಟಿಕೆಟ್‌ ನೀಡಿರುವುದಕ್ಕೆ ಅಸಮಾಧಾನಗೊಂಡಿರುವ ಎಸ್‌.ಎಂ.ಕೃಷ್ಣ ಅವರ ಅಣ್ಣನ ಮಗ ಎಸ್‌.ಗುರುಚರಣ್‌ ಗುರುವಾರ ಕಾಂಗ್ರೆಸ್‌ ತ್ಯಜಿಸಿ ಜೆಡಿಎಸ್‌ ಸೇರ್ಪಡೆಯಾಗುತ್ತಿದ್ದಾರೆ.

ಗುರುವಾರ ಬೆಳಿಗ್ಗೆ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಅವರು ಮದ್ದೂರು ತಾಲ್ಲೂಕು, ಸೋಮನಹಳ್ಳಿ ಗ್ರಾಮದ ಗುರುಚರಣ್‌ ನಿವಾಸಕ್ಕೆ ಭೇಟಿ ನೀಡಲಿದ್ದಾರೆ. ಅವರ ಸಮ್ಮುಖದಲ್ಲಿ ಗುರುಚರಣ್‌ ಹಾಗೂ ಅವರ ಬೆಂಬಲಿಗರು ಜೆಡಿಎಸ್‌ ಸೇರ್ಪಡೆಗೊಳ್ಳಲಿದ್ದಾರೆ.

ಅವರು ಮದ್ದೂರು ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಡಿ.ಸಿ.ತಮ್ಮಣ್ಣ ಅವರಿಗೆ ಬೆಂಬಲ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

‘ಜೂಜು ಆಡಿಸುವವರು, ಅಕ್ರಮ ದಂಧೆ ನಡೆಸುವವರಿಗೆ ಕಾಂಗ್ರೆಸ್‌ ಪಕ್ಷ ಟಿಕೆಟ್‌ ನೀಡಿದೆ. ವರ್ಷದ ಹಿಂದೆಯೇ ನನ್ನ ಹೆಸರು ಘೋಷಣೆ ಮಾಡಿ ಈಗ ಅನ್ಯಾಯ ಮಾಡಿದ್ದಾರೆ. ನನ್ನ ಬೆಂಬಲಿಗರು ಹಾಗೂ ಹಿತೈಷಿಗಳ ಸಲಹೆ ಮೇರೆಗೆ ನಾನು ಜೆಡಿಎಸ್‌ ಸೇರ್ಪಡೆಯಾಗುತ್ತಿದ್ದೇನೆ’ ಎಂದು ಎಸ್‌.ಗುರುಚರಣ್‌ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT