ಮದ್ದೂರು: ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವ ಅನ್ಯಪಕ್ಷಗಳ ಮುಖಂಡರಿಗೆ ಮುಂದಿನ ದಿನಗಳಲ್ಲಿ ಸೂಕ್ತ ಸ್ಥಾನಮಾನ ನೀಡಲಾಗುವುದು ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.

ಕ್ಷೇತ್ರದ ಆಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲೂರು, ಬೂದಗುಪ್ಪೆ, ಚುಂಚಗಳ್ಳಿ, ಆಲೂರು ದೊಡ್ಡಿ, ನೀಲಕಂಠನಹಳ್ಳಿ ಸೇರಿದಂತೆ ಹಲವು ಗ್ರಾಮಗಳ ಬಿಜೆಪಿ, ಜೆಡಿಎಸ್ನ ಯುವ ಮುಖಂಡರನ್ನು ಆಲೂರು ಗ್ರಾ.ಪಂ ಸದಸ್ಯ ಎಸ್.ಉದಯ್ ಶಂಕರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಅವರು ಮಾತನಾಡಿದರು.

ಕ್ಷೇತ್ರದಲ್ಲಿ ಬದಲಾವಣೆ ತರುವ ನಿಟ್ಟಿನಲ್ಲಿ ಯುವಪಡೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವುದು ನನಗೆ ಅಭಿವೃದ್ಧಿ ಮಾಡಲು ಮತ್ತಷ್ಟು ಉತ್ಸಾಹ ನೀಡಿದೆ ಎಂದ ಅವರು, ಆಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅತೀ ಹೆಚ್ಚು ಮತ ಕೊಟ್ಟು ನನಗೆ ಆಶೀರ್ವಾದ ಮಾಡಿದ್ದಿರಿ. ನಿಮ್ಮ ನಂಬಿಕೆಗೆ ನಾನು ದ್ರೋಹ ಮಾಡಲ್ಲ. ನಿರೀಕ್ಷೆಗೂ ಮೀರಿ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದರು.

ಗ್ರಾಮಗಳಲ್ಲಿನ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಒಗ್ಗಟ್ಟಿನಿಂದ ಇದ್ದರೆ ಮಾತ್ರ ಅಭಿವೃದ್ಧಿ ಸಾಧ್ಯವಾಗಲಿದೆ. ನೀವು ನನಗೆ ಆಶೀರ್ವಾದ ಮಾಡಿರೋದು ಗ್ರಾಮಗಳ ಅಭಿವೃದ್ಧಿ ಮಾಡುವುದಕ್ಕೆ, ಅದುಬಿಟ್ಟು ರಾಜಕೀಯ ಬೆರೆಸಿ ಗುಂಪುಗಾರಿಕೆ ಮಾಡುವ ವ್ಯಕ್ತಿ ನಾನಲ್ಲ. ಕ್ಷೇತ್ರದ ಅಭಿವೃದ್ಧಿಯೇ ನನ್ನ ಮೂಲ ಮಂತ್ರ ಎಂದರು.

ಮುಖಂಡ ಎಸ್.ಉದಯ್ ಶಂಕರ್ ಮಾತನಾಡಿ, ಆಲೂರು ಗ್ರಾ.ಪಂ ವ್ಯಾಪ್ತಿಯ ಗ್ರಾಮಗಳ ಅಭಿವೃದ್ಧಿ ದೃಷ್ಟಿಯಿಂದ ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆಯೇ ಹೊರತು ಯಾವುದೇ ವೈಯಕ್ತಿಕ ಆಮಿಷಕ್ಕೆ ಒಳಗಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿಲ್ಲ. ಶಾಸಕ ಕೆ.ಎಂ.ಉದಯ್ ಅವರು ಕೇವಲ ಎರಡೂವರೆ ವರ್ಷಗಳಲ್ಲಿ ₹ 1,800 ಕೋಟಿ ಅನುದಾನದಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದರು.

ಮುಖಂಡರಾದ ಮಧುಸೂದನ್, ಆಲೂರು ಗ್ರಾಮದ ಶಿವಣ್ಣ, ನಟರಾಜು, ವಿವೇಕ್, ಶಿವಲಿಂಗಣ್ಣ, ಜಗ್ಗಿ, ಉಮೇಶ್, ಅರಕೇಶ್, ಬೀರೇಶ್, ಚುಂಚನಹಳ್ಳಿ ಗ್ರಾಮದ ಮಧು, ಶಿವಣ್ಣ, ಬೂದುಗುಪ್ಪೆ ಗ್ರಾಮದ ನಂದಿ, ಮಹದೇವು, ವಿಜಿ, ರಾಜಣ್ಣ ಸೇರಿದಂತೆ ಹಲವಾರು ಮುಖಂಡರು ಜೆಡಿಎಸ್ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಗೊಂಡರು. ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಲುವರಾಜು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.