ಭಾರತೀನಗರ: ಮದ್ದೂರು ಕ್ಷೇತ್ರದ ಅಭಿವೃದ್ಧಿಗೆ ಪಣತೊಟ್ಟಿದ್ದು, ಹಂತಹಂತವಾಗಿ ಅಭಿವೃದ್ದಿಪಡಿಸಲಾಗುವುದು ಎಂದು ಶಾಸಕ ಕೆ.ಎಂ.ಉದಯ್ ಹೇಳಿದರು.

ಇಲ್ಲಿನ ಮಾದೇಗೌಡ ಬಡಾವಣೆಯಲ್ಲಿ ₹55 ಲಕ್ಷ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

‘ತಾಲ್ಲೂಕಿನಾದ್ಯಂತ ಸಾಕಷ್ಟು ಸಮಸ್ಯೆಗಳಿದ್ದು, ಎಲ್ಲವನ್ನೂ ಒಂದೇ ಬಾರಿಗೆ ಪರಿಹರಿಸಲು ಸಾಧ್ಯವಿಲ್ಲ. ಮುಖ್ಯವಾದ ಸಮಸ್ಯೆಗಳನ್ನು ಕೈಗೆತ್ತಿಕೊಂಡು ಅಭಿವೃದ್ದಿ ಕೆಲಸ ಮಾಡಲಿದ್ದು, ಇದಕ್ಕೆ ಎಲ್ಲರ ಸಹಕಾರ ಅಗತ್ಯ. ಭಾರತೀನಗರ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿ ಮಾಡಲು ಸಾಧ್ಯವಿಲ್ಲ. ಅಕ್ಕಪಕ್ಕದ ಪಂಚಾಯಿತಿಗಳನ್ನು ಪಟ್ಟಣ ಪಂಚಾಯಿತಿಗೆ ಸೇರಿಸಿಕೊಳ್ಳಬೇಕಾಗುತ್ತದೆ. ಇದಕ್ಕೆ ಅಕ್ಕಪಕ್ಕದ ಗ್ರಾಮ ಪಂಚಾಯಿತಿಗಳ ಒಪ್ಪಿಗೆಯೂ ಬೇಕು. ಹಾಗಾದಲ್ಲಿ ಪಟ್ಟಣ ಪಂಚಾಯಿತಿ ಮಾಡಲು ಯಾವುದೇ ತೊಡಕಿಲ್ಲ’ ಎಂದು ತಿಳಿಸಿದರು.

ಶಾಸಕ ಕೆ.ಎಂ.ಉದಯ್ ಅವರನ್ನು ಸ್ಥಳೀಯ ಮುಖಂಡರು ಅಭಿನಂದಿಸಿದರು. ಬಳಿಕ ಸಾರ್ವಜನಿಕರಿಂದ ಶಾಸಕ ಉದಯ್ ಅಹವಾಲುಗಳನ್ನು ಸ್ವೀಕರಿಸಿದರು.

ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ಸಂದರ್ಶ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎ.ಎಸ್.ರಾಜೀವ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಚಿಕ್ಕವೆಂಕಟೇಗೌಡ, ಸದಸ್ಯರಾದ ಕೆ.ಟಿ.ಶ್ರೀನಿವಾಸ್, ಕೆ.ವಿ.ಶ್ರೀನಿವಾಸ್, ಮುಖಂಡರಾದ ದಾಸೇಗೌಡ, ಬಿ.ಎಸ್.ಬೋರೇಗೌಡ, ಶೆಟ್ಟಹಳ್ಳಿ ಸಿದ್ದೇಗೌಡ, ವಸಂತಮ್ಮ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-40-359657060

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.