ಮದ್ದೂರು: ನಗರದ ಹೊಳೇಬೀದಿಯಲ್ಲಿರುವ ಶ್ರೀ ರೇಣುಕಾ ಎಲ್ಲಮ್ಮ ದೇವಿಯವರ 54ನೇ ವರ್ಷದ ಜಾತ್ರಾ ಮಹೋತ್ಸವದ ಅಂಗವಾಗಿ ಭಾನುವಾರ ರಾತ್ರಿ ನಡೆದ ಮುತ್ತಿನ ಪಲ್ಲಕ್ಕಿ ಉತ್ಸವ ಭಕ್ತರ ಕಣ್ಮನ ಸೆಳೆಯಿತು.

ರಾತ್ರಿ 9ಕ್ಕೆ ಪಟ್ಟಣದ ಪ್ರಸಿದ್ಧ ಶ್ರೀ ಹೊಳೆ ಆಂಜನೇಯ ಸ್ವಾಮಿ ದೇವಸ್ಥಾನದಿಂದ ಮುತ್ತಿನ ಪಲ್ಲಕ್ಕಿ ಉತ್ಸವ ಪ್ರಾರಂಭವಾಯಿತು. ವಿವಿಧ ವಿಶೇಷ ಹೂವುಗಳಿಂದ ಹಾಗೂ ದೀಪಾಲಂಕಾರದಿಂದ ಪಲ್ಲಕ್ಕಿ ಉತ್ಸವ ಕೊಂಗೊಳಿಸಿತು.

ಈ ವೇಳೆ ತಿರುಪತಿ ತಿರುಮಲ ದೇವಸ್ಥಾನದ ಮಂಜು ಬಾಲಾಜಿ ಅವರ ವಾದ್ಯಗೋಷ್ಠಿ, ಮಂಗಳೂರಿನ ಯಕ್ಷಗಾನ, ಕೇರಳದ ಚಂಡೆ ಮೇಳ, ತಮಿಳುನಾಡಿನ ಬ್ಯಾಂಡ್ ಸೆಟ್ ಸೇರಿದಂತೆ ಮದ್ದೂರಮ್ಮ ನವರ ಪೂಜಾ ಕುಣಿತ, ದಂಡಿನಮಾರಮ್ಮನವರ ಪೂಜಾ ಕುಣಿತ, ಕಲಾವಿದರಿಂದ ತಮಟೆ, ನಗಾರಿ, ಜಾನಪದ ಮೇಳ ಮೆರವಣಿಗೆಯಲ್ಲಿ ಸಾಗಿದವು.

ರಾತ್ರಿಇಡೀ ಪಟ್ಟಣದ ಪ್ರಮುಖ ಬೀದಿಗಳಾದ ಹೊಳೆ ಬೀದಿ, ಒಕ್ಕಲಿಗರ ಬೀದಿ, ಸೋಮೇಗೌಡರ ಬೀದಿ, ಪೇಟೆ ಬೀದಿ, ದೊಡ್ಡಿ ಬೀದಿ, ಮೇಗಳ ಬೀದಿ, ಗಂಗ ಮತಸ್ಥರ ಬೀದಿ ಸೇರಿದಂತೆ ಹಲವು ಬೀದಿಗಳಲ್ಲಿ ಪಲ್ಲಕ್ಕಿ ಉತ್ಸವ ಸಾಗಿತು. ಈ ವೇಳೆ ಮಹಿಳೆಯರು ಪ್ರತಿ ಮನೆಗಳ ಮುಂದೆ ದೇವಿಯ ಉತ್ಸವಕ್ಕೆ ಆರತಿ ಬೆಳಗಿ ಪೂಜೆ ಸಲ್ಲಿಸಿದರು.

ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಪಟ್ಟಣದ ಪೇಟೆಬೀದಿಯಿಂದ ಹೊಳೆ ಬೀದಿಯಲ್ಲಿರುವ ಎಲ್ಲಮ್ಮ ದೇವಸ್ಥಾನದ ವರೆಗೆ ವಿದ್ಯುತ್ ದೀಪಾಲಂಕಾರ ಹಾಗೂ ಮಹಾದ್ವಾರಕ್ಕೆ ಹಾಗೂ ದೇವಸ್ಥಾನಕ್ಕೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು. ಸೋಮವಾರ ಬೆಳ್ಳಿಗ್ಗೆ ಮುತ್ತಿನ ಪಲ್ಲಕ್ಕಿ ಉತ್ಸವ ದೇವಸ್ಥಾನ ತಲುಪಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.