ಮದ್ದೂರು: ಶ್ರೀನಿಧಿಗೌಡ ಸಾಂಸ್ಕೃತಿಕ ಶೈಕ್ಷಣಿಕ ಟ್ರಸ್ಟ್ ಹಾಗೂ ಅಕ್ಷರ ಫೌಂಡೇಶನ್ ಗ್ರಾಮಾಭಿವೃದ್ಧಿ ಸಂಸ್ಥೆ ವತಿಯಿಂದ ತಾಲ್ಲೂಕಿನ ಯುವಕರಿಗೆ ಉದ್ಯೋಗ ಕಲ್ಪಿಸುವ ಸದುದ್ದೇಶದಿಂದ ಏ.21ರಂದು ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಮನ್ಮುಲ್ ನಿರ್ದೇಶಕ ಎಸ್.ಪಿ. ಸ್ವಾಮಿ ತಿಳಿಸಿದರು.

ನಗರದ ಮಳವಳ್ಳಿ ರಸ್ತೆಯಲ್ಲಿರುವ ಬಿಜೆಪಿ ಕಚೇರಿಯಲ್ಲಿ ಉದ್ಯೋಗ ಮೇಳದ ಪೋಸ್ಟರ್ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ‘ಕಚೇರಿ ಆವರಣದಲ್ಲಿ ಅಂದು ಬೆಳಿಗ್ಗೆ 9ರಿಂದ ಸಂಜೆ 5ರವರಗೆ ಉದ್ಯೋಗ ಮೇಳ ನಡೆಯದ್ದು, ಆಕಾಂಕ್ಷಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು’ ಎಂದು ಮನವಿ ಮಾಡಿದರು.

50ಕ್ಕೂ ಹೆಚ್ಚು ಕಂಪನಿಗಳು ಪಾಲ್ಗೊಳ್ಳುತ್ತಿದ್ದು, ಈ 5 ಸಾವಿರಕ್ಕೂ ಹೆಚ್ಚು ಉದ್ಯೋಗಾವಕಾಶಗಳು ಲಭ್ಯವಿರುವುದು ವಿಶೇಷ. ಉದ್ಯೋಗಮೇಳವು ಉನ್ನತ ವ್ಯಾಸಂಗ ಮಾಡಿದವರಿಗೆ ಸೀಮಿತವಾಗಿಲ್ಲ. ಬದಲಾಗಿ, ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಯಾವುದೇ ಪದವಿ ಹಾಗೂ ಸ್ನಾತಕೋತ್ತರ ಪದವಿ ಹಾಗೂ ವಿಶೇಷವಾಗಿ ಅಂಗವಿಕಲರಿಗೂ ಸಹ ಉದ್ಯೋಗಗಳು ಲಭ್ಯವಿವೆ’ ಎಂದರು.

‘ಉತ್ಪಾದನಾ ವಲಯ, ಬ್ಯಾಂಕಿಂಗ್, ಮಾರಾಟ, ಮಾಹಿತಿ ತಂತ್ರಜ್ಞಾನ, ಕೈಗಾರಿಕೆ, ಗಾರ್ಮೆಂಟ್ಸ್, ಸೇವಾ ವಲಯ, ಪ್ರವಾಸೋದ್ಯಮ, ಹಣಕಾಸು ಹಾಗೂ ನಿರ್ವಹಣಾ ಕ್ಷೇತ್ರ ಸೇರಿದಂತೆ ಹತ್ತು ಹಲವು ವಿಭಾಗಗಳಲ್ಲಿ ಆಕಾಂಕ್ಷಿಗಳು ತಮ್ಮ ಕೌಶಲಕ್ಕೆ ತಕ್ಕಂತೆ ಉದ್ಯೋಗ ಪಡೆದುಕೊಳ್ಳಬಹುದಾಗಿದ್ದು, ಆಯ್ಕೆಯಾದವರಿಗೆ ಸ್ಥಳದಲ್ಲಿಯೇ ನೇಮಕಾತಿ ಪತ್ರವನ್ನು ವಿತರಿಸಲಾಗುವುದು’ ಎಂದು ತಿಳಿಸಿದರು.

‘ಆಸಕ್ತರು ಮೊದಲೇ ಕಚೇರಿಗೆ ಭೇಟಿ ಕೊಟ್ಟು ಪೂರ್ವ ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಿದ್ದು, 21ರಂದು ನೇರವಾಗಿ ಉದ್ಯೋಗ ಮೇಳ ನಡೆಯುವ ಸ್ಥಳಕ್ಕೆ ತಮ್ಮ ಎಲ್ಲಾ ಶೈಕ್ಷಣಿಕ ದಾಖಲೆಗಳು ಹಾಗೂ ಸ್ವವಿವರಗಳೊಂದಿಗೆ (10 ಪ್ರತಿಗಳು) ಹಾಜರಾಗಿ, ಸ್ಥಳದಲ್ಲೇ ನೋಂದಣಿ ಮಾಡಿಕೊಂಡು ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ’ ಎಂದರು.

ಮಾಹಿತಿಗೆ 8792143221, ದೇವರಾಜ್ - 7996163105 ಹಾಗೂ ಕಚೇರಿ- 7899488488 ದೂರವಾಣಿ ಸಂಖ್ಯೆ ಕರೆ ಮಾಡಲು ಮನವಿ ಮಾಡಿದರು.

ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಶಿವದಾಸ್ ಸತೀಶ್, ಮುಖಂಡರಾದ ಕುಮಾರ್ ಉಪ್ಪಾರ್, ಮಹೇಂದ್ರ ಕುಮಾರ್, ಕಾಂತರಾಜು, ಮಧು, ಅಭಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-40-1688670424

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.