ಮದ್ದೂರು: ಲೋಕಾಯುಕ್ತ ಅಧಿಕಾರಿಗಳಿಂದ ಗುರುವಾರ ಪಟ್ಟಣದ ತಾಲ್ಲೂಕು ಕಚೇರಿಯ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಾಯಿತು.

ಲೋಕಾಯುಕ್ತ ಎಸ್ಪಿ ಸುರೇಶ್ ಬಾಬು ಮಾತನಾಡಿ, ‘ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ರೈತರನ್ನು ಹಾಗೂ ಸಾರ್ವಜನಿಕರನ್ನು ಕಚೇರಿಗೆ ಅನಗತ್ಯವಾಗಿ ಅಲೆದಾಡಿಸದೆ ನಿಗದಿತ ಸಮಯಕ್ಕೆ ಕೆಲಸ ಮಾಡಿಕೊಡಬೇಕು’ ಎಂದು ಸಭೆಯಲಿದ್ದ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು.

ಸಂಬಂಧಪಟ್ಟ ಅಧಿಕಾರಿಗಳು ಸರ್ಕಾರದ ಸಲವತ್ತುಗಳನ್ನು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ಅನತ್ಯವಾಗಿ ವಿಳಂಬ ಮಾಡುವುದು, ಕಚೇರಿಗೆ ಅಲೆಸುವುದು, ಹಣಕ್ಕಾಗಿ ಬೇಡಿಕೆ ಇಡುವುದು ಕಂಡು ಬಂದರೆ ಅಂತಹ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ತಾಲ್ಲೂಕಿನ ವಿವಿಧ ಭಾಗಗಳಿಂದ ಆಗಮಿಸಿದ ಸಾರ್ವಜನಿಕರಿಂದ ಸಭೆಯಲ್ಲಿ ಒಟ್ಟು 37 ಅರ್ಜಿಗಳನ್ನು ಸ್ವೀಕರಿಸಲಾಯಿತು. ಅದರಲ್ಲಿ 26 ಅರ್ಜಿಗಳನ್ನು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಈಡೇರಿಸುವ ಬಗ್ಗೆ ಸಭೆಯಲ್ಲೇ ಭರವಸೆ ನೀಡಿದ ಬಳಿಕ ಉಳಿದ 11 ಅರ್ಜಿಗಳನ್ನು ಪರಿಶೀಲಿಸಿ ದೂರು ದಾಖಲು ಮಾಡಿಕೊಳ್ಳಲಾಯಿತು.

ಸಭೆಯಲ್ಲಿ ಲೋಕಾಯುಕ್ತ ಡಿವೈಎಸ್ಪಿ ಸುನೀಲ್ ಕುಮಾರ್, ಇನ್ಸ್ಪೆಕ್ಟರ್ಗಳಾದ ಕುಮಾರ್, ಬ್ಯಾಟರಾಯಗೌಡ, ಲೇಪಾಕ್ಷಮೂರ್ತಿ ಹಾಗೂ ತಹಶೀಲ್ದಾರ್ ಪರಶುರಾಮ ಸತ್ತಿಗೇರಿ, ಉಪ ತಹಶೀಲ್ದಾರ್ ಸೋಮಶೇಖರಯ್ಯ, ತಾ.ಪಂ ಇಒ ರಾಮಲಿಂಗಯ್ಯ ಮತ್ತು ಅಧಿಕಾರಿಗಳು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.