ಮದ್ದೂರು: ‘ಹಳ್ಳಿಗಾಡಿನ ಜನರ ನೆಮ್ಮದಿಯನ್ನು ಕದಡಬಾರದು. ನಗರಸಭಾ ವ್ಯಾಪ್ತಿಗೆ ಗ್ರಾಮ ಪಂಚಾಯಿತಿಗಳ ಸೇರ್ಪಡೆಯನ್ನು ಕೈಬಿಡಬೇಕು’ ಎಂದು ಜೆಡಿಎಸ್ ರಾಜ್ಯಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಗ್ರಹಿಸಿದರು.

ಮದ್ದೂರು ನಗರಸಭೆಗೆ ಗ್ರಾಮ ಸೇರ್ಪಡೆ ವಿರೋಧಿಸಿ 33 ದಿನಗಳಿಂದ ಗ್ರಾಮಸ್ಥರು ತಾಲ್ಲೂಕಿನ ಗೆಜ್ಜಲಗೆರೆಯ ಗ್ರಾ. ಪಂ ಮುಂದೆ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಪ್ರತಿಭಟನೆಯಲ್ಲಿ ಶುಕ್ರವಾರ ಪಾಲ್ಗೊಂಡು ಅವರು ಮಾತನಾಡಿದರು.

‘ಈ ಹೋರಾಟಕ್ಕೆ ನಮ್ಮ ಬೆಂಬಲವಿದೆ. ನಾವು ಗ್ರಾಮಸ್ಥರ ಜೊತೆ ಇರುತ್ತೇವೆ,ಜಯ ಸಿಕ್ಕುವವರೆಗೆ ಹೋರಾಟ ಮಾಡುತ್ತೇವೆ. ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಅವರು,ರಾಜ್ಯ ಸರ್ಕಾರವು ರೈತರರನ್ನು ಒಕ್ಕಲೆಬ್ಬಿಸುವುದನ್ನು ಬಿಟ್ಟು ರೈತರ ಅಭಿವೃದ್ಧಿ ಮಾಡಬೇಕು. ರೈತರ ಭಾವನೆಗಳಿಗೆ ಧಕ್ಕೆಯಾಗಬಾರದು’ ಎಂದರು.

‘ಹಳ್ಳಿಯ ಸೊಗಡನ್ನು ಉಳಿಸಬೇಕು. ವಾಸ್ತವ ಅಂಶಗಳನ್ನು ಅರಿತು ಕೆಲಸ ಮಾಡಬೇಕು. ಈ ವಿಷಯವನ್ನು ಅಧಿವೇಶನದಲ್ಲಿ ಚರ್ಚೆ ಮಾಡಿ ಈ ಪ್ರತಿಭಟನೆಯನ್ನು ಸುಖಾoತ್ಯಕ್ಕೆ ತೆಗೆದುಕೊಂಡು ಹೋಗಬೇಕೆಂದು ಮೈತ್ರಿ ಪಕ್ಷದ ನಾಯಕರ ಜೊತೆ ಮಾತನಾಡಿದ್ದೇನೆ’ ಎಂದು ತಿಳಿಸಿದರು.

‘ಈ ವಿಷಯವನ್ನು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ಗಂಭೀರವಾಗಿ ಚರ್ಚಿಸುತ್ತೇನೆ ಹಾಗೂ ಹೋರಾಟದ ಸ್ಥಳಕ್ಕೆ ಕರೆತರುತ್ತೇನೆ. ಈ ಹೋರಾಟವನ್ನು ಅರ್ಧ ದಾರಿಯಲಿ ಬಿಟ್ಟು ಹೋಗುವ ಕೆಲಸ ಮಾಡುವುದಿಲ್ಲ. ಯಾವ ರೀತಿ ಪರಿಹಾರ ಮಾಡಬೇಕು ಎಂಬುದನ್ನು ಚರ್ಚಿಸಿ, ಸೂಕ್ತ ನಿರ್ಧಾರವನ್ನು ತೆಗೆದುಕೊಳ್ಳಬೇಕೆಂಬುದರ ಬಗ್ಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ’ ಎಂದು ಗ್ರಾಮಸ್ಥರಿಗೆ ತಿಳಿಸಿದರು.

ಮಾಜಿ ಸಚಿವ ಡಿ.ಸಿ.ತಮ್ಮಣ್ಣ, ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಡಿ.ರಮೇಶ್, ರೈತಪರ ಹೋರಾಟಗಾರರಾದ ಸುನಂದಾ ಜಯರಾಂ, ಮುಖಂಡರಾದ, ಮಾದನಾಯಕನಹಳ್ಳಿ ರಾಜಣ್ಣ, ಮನ್ಮುಲ್ ಮಾಜಿ ಅಧ್ಯಕ್ಷ ರಾಮಚಂದ್ರು, ಪುರಸಭೆ ಮಾಜಿ ಅಧ್ಯಕ್ಷ ಪ್ರವೀಣ್, ಗ್ರಾಮಸ್ಥರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.