ಮದ್ದೂರು: ಈ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲ್ಲೂಕಿಗೆ ಉತ್ತಮ ಫಲಿತಾಂಶ ಬಂದಿದ್ದು, ಶೇಕಡಾವಾರು ಫಲಿತಾಂಶ ಗಣನೀಯ ಏರಿಕೆ ಕಂಡಿದೆ ಎಂದು ಬಿಇಒ ಧನಂಜಯ ತಿಳಿಸಿದರು.

ನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಕಳೆದ ಸಾಲಿನಲ್ಲಿ ಶೇ 65.65 ಫಲಿತಾಂಶ ಪಡೆದು ಜಿಲ್ಲೆಯಲ್ಲಿ 6 ನೇ ಸ್ಥಾನದಲ್ಲಿತ್ತು, ಆದರೆ ಈ ಬಾರಿ ಶೇ 97.30 ಫಲಿತಾಂಶ ಪಡೆದು ಜಿಲ್ಲೆಯಲ್ಲಿ 5ನೇ ಸ್ಥಾನದಲ್ಲಿದೆ ಎಂದರು.

ತಾಲ್ಲೂಕಿನ ವ್ಯಾಪ್ತಿಯಲ್ಲಿ ಈ ಬಾರಿ ಪರೀಕ್ಷೆ ಬರೆದಿದ್ದ ಒಟ್ಟು 3,116 ವಿದ್ಯಾರ್ಥಿಗಳ ಪೈಕಿ 3032 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಅದರಲ್ಲಿ ಏ ಪ್ಲಸ್ ಶ್ರೇಣಿಯಲ್ಲಿ 361, ಏ ಶ್ರೇಣಿಯಲ್ಲಿ 641, ಬಿ ಪ್ಲಸ್ ಶ್ರೇಣಿಯಲ್ಲಿ 612, ಬಿ ಶ್ರೇಣಿಯಲ್ಲಿ 637 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಎಂದರು.

ತಾಲ್ಲೂಕು ವ್ಯಾಪ್ತಿಯಲ್ಲಿರುವ ಒಟ್ಟು 90 ಪ್ರೌಢಶಾಲೆಗಳ ಪೈಕಿ 60 ಶಾಲೆಗಳು ಶೇ 100ರಷ್ಟು ಫಲಿತಾಂಶ ಪಡೆದಿದ್ದು ಅದರಲ್ಲಿ 29 ಸರ್ಕಾರಿ, 4 ಅನುದಾನಿತ, 23 ಖಾಸಗಿ ಹಾಗೂ 6 ವಸತಿ ಶಾಲೆಗಳು ಸಾಧನೆ ಮಾಡಿವೆ ಎಂದರು.

ತಾಲ್ಲೂಕಿನ ಚಂದೂಪುರ ಗ್ರಾಮದ ಡಿ.ಕೆ. ಗೌಡ ಶಾಲೆಯ ವಿದ್ಯಾರ್ಥಿನಿ ಎಚ್,ಎನ್. ನವ್ಯಾ 618 ಅಂಕಗಳನ್ನು ಪಡೆಯುವುದರೊಂದಿಗೆ ತಾಲ್ಲೂಕಿಗೆ ಪ್ರಥಮ, ತಾಲ್ಲೂಕಿನ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ವಂದನಾ 615 ಅಂಕಗಳನ್ನು ಪಡೆಯುವುದರೊಂದಿಗೆ ದ್ವಿತೀಯ, ತಾಲ್ಲೂಕಿನ ಕೊಪ್ಪ ಹೋಬಳಿಯ ಗೊಲ್ಲರದೊಡ್ಡಿ ಗ್ರಾಮದ ದಿವ್ಯಜ್ಯೋತಿ ಶಾಲೆಯ ವಿದ್ಯಾರ್ಥಿ ಭಾರ್ಗವ್ 614 ಅಂಕ ಪಡೆಯುವುದರೊಂದಿಗೆ ತೃತೀಯ ಹಾಗೂ ತಾಲ್ಲೂಕಿನ ಕೆಸ್ತೂರು ಗ್ರಾಮದ ಅಕ್ಷರಧಾಮ ಶಾಲೆಯ ವಿದ್ಯಾರ್ಥಿನಿ ನಂದಿತಾ 613 ಅಂಕಗಳನ್ನು ಪಡೆಯುವುದರೊಂದಿಗೆ 4 ನೇ ಸ್ಥಾನವನ್ನು ಪಡೆದಿದ್ದಾರೆ ಎಂದರು.

ಉತ್ತಮ ಫಲಿತಾಂಶ ಬರಲು ಕಾರಣರಾದ ಶಾಲೆಗಳ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಪಾತ್ರ ಹಾಗೂ ಶ್ರಮವನ್ನು ಧನಂಜಯ ಶ್ಲಾಘಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-40-1783550160

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.