ಮದ್ದೂರು: ಇಲ್ಲಿನ ಪುರಸಭೆಯನ್ನು ನಗರಸಭೆಯನ್ನಾಗಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

23 ವಾರ್ಡ್ಗಳನ್ನು ಹೊಂದಿರುವ ಪುರಸಭೆಗೆ ಸಮೀಪದ ಚಾಮನಹಳ್ಳಿ ಗ್ರಾ.ಪಂ.ದೇಶಹಳ್ಳಿ, ಸೋಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೋಮನಹಳ್ಳಿ, ಕೆ. ಕೋಡಿಹಳ್ಳಿ, ರುದ್ರಾಕ್ಷಿಪುರ, ಅಗರಲಿಂಗನದೊಡ್ಡಿ, ಗೆಜ್ಜಲಗೆರೆ ಗ್ರಾಮ ಪಂಚಾಯಿತಿಯ ಗೆಜ್ಜಲಗೆರೆ ಹಾಗೂ ಗೊರವನಹಳ್ಳಿ ಗ್ರಾಮಗಳು ನಗರಸಭಾ ವ್ಯಾಪ್ತಿಗೆ ಬರಲಿವೆ.

ಮದ್ದೂರು ನಗರಸಭಾ ವ್ಯಾಪ್ತಿಗೆ ಸೇರ್ಪಡೆಗೊಳಿಸಬಾರದು ಎಂದು ಆಗ್ರಹಿಸಿ ಕೆಲವು ತಿಂಗಳುಗಳ ಹಿಂದೆ ಗೆಜ್ಜಲಗೆರೆ, ಸೋಮನಹಳ್ಳಿ, ಚಾಮನಹಳ್ಳಿ ಹಾಗೂ ಗೊರವನಹಳ್ಳಿ ಗ್ರಾಮದ ಗ್ರಾಮಸ್ಥರು ಹಾಗೂ ಕೆಲವು ಸಂಘಟನೆಯವರು ಸ್ಥಳೀಯ ಗ್ರಾಮ ಪಂಚಾಯಿತಿಗಳ ಮುಂದೆ ಹಾಗೂ ಪಟ್ಟಣದ ತಾಲ್ಲೂಕು ಕಚೇರಿಯೆದುರು ಪ್ರತಿಭಟನೆ ನಡೆಸಿದ್ದರು.

ಗ್ರಾಮಗಳು ಮದ್ದೂರು ನಗರಸಭೆಗೆ ಒಳಪಟ್ಟರೆ ಗ್ರಾಮೀಣ ಕೃಪಾಂಕ, ನರೇಗಾ ಕೆಲಸಗಳಿಂದ ವಂಚಿತರಾಗಬೇಕಾಗುತ್ತದೆ. ನಿವೇಶನಗಳ ಹಾಗೂ ನೀರಿನ ಕಂದಾಯ ಹೆಚ್ಚಾಗುತ್ತದೆ ಎಂಬುದು ಅವರ ವಾದವಾಗಿತ್ತು.

ನಗರಸಭೆಯಾಗುವುದು ಸ್ವಾಗತಾರ್ಹವಾಗಿದ್ದು ಮದ್ದೂರಿನ ಅಭಿವೃದ್ಧಿಗೆ ಪೂರಕವಾಗಿದೆ. ಇದರಲ್ಲಿ ಕ್ಷೇತ್ರದ ಶಾಸಕ ಕೆ.ಎಂ.ಉದಯ್ ಅವರ ಶ್ರಮವಿದೆ.
– ಕೋಕಿಲಾ ಅರುಣ್, ಪುರಸಭಾ ಅಧ್ಯಕ್ಷೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.