ಮದ್ದೂರು: ‘ಮದ್ದೂರಿಗೂ 220 ಕೆ.ವಿ. ಸಾಮರ್ಥ್ಯದ ಸಬ್ ಸ್ಟೇಷನ್ ನಿರ್ಮಾಣ ಮಾಡಬೇಕೆಂದು 25 ವರ್ಷಗಳಿಂದ ಹೋರಾಟ ನಡೆಯುತ್ತಿತ್ತು. ಶಾಸಕ ಉದಯ್ ಅವರ ಎರಡೂವರೆ ವರ್ಷಗಳ ನಿರಂತರ ಪ್ರಯತ್ನದಿಂದಾಗಿ ಇಂದು ಚಾಲನೆ ನೀಡಲಾಗುತ್ತಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.

ತಾಲ್ಲೂಕಿನ ಸೋಮನಹಳ್ಳಿಯಲ್ಲಿ ಗುರುವಾರ ನೂತನ 220 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದ ನಿರ್ಮಾಣ ಕಾಮಗಾರಿಗೆ ಗುರುವಾರ ಭೂಮಿಪೂಜೆಯನ್ನು ನೆರವೇರಿಸಿದ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪಂಚ ಗ್ಯಾರಂಟಿ ಜೊತೆಗೆ ಅಭಿವೃದ್ಧಿ ಕಾರ್ಯಕ್ಕೂ ನಮ್ಮ ಸರ್ಕಾರ ಆದ್ಯತೆ ನೀಡಿದೆ ಎಂದರು.

ಕಳೆದ ಮೂರು ವರ್ಷಗಳಲ್ಲಿ ಇಡೀ ರಾಜ್ಯದಲ್ಲಿಯೇ ಮುಖ್ಯಮಂತ್ರಿಗಳ ತವರು ಜಿಲ್ಲೆಯಾದ ಮೈಸೂರು ಜಿಲ್ಲೆಯನ್ನು ಹೊರತು ಪಡಿಸಿದರೆ ಎರಡನೇ ಸ್ಥಾನದಲ್ಲಿ ಅತಿ ಹೆಚ್ಚು ಅನುದಾನ ಬಿಡುಗಡೆಯಾಗಿರೋದು ಮಂಡ್ಯ ಜಿಲ್ಲೆಗೆ. ಸ್ವಾತಂತ್ರ್ಯ ಬಂದ ನಂತರ ತೂಬಿನಕೆರೆ ಬಳಿ ಮಾತ್ರ 220 ಕೆ.ವಿ ಸಾಮರ್ಥ್ಯದ ಸಬ್ ಸ್ಟೇಷನ್ ಇತ್ತು. ನಂತರ ಕೆ.ಆರ್.ಪೇಟೆ, ಶ್ರೀರಂಗಪಟ್ಟಣ, ನಾಗಮಂಗಲದಲ್ಲಿ ನಿರ್ಮಾಣವಾಗಿತ್ತು ಎಂದು ಹೇಳಿದರು.

ಸೂಳೆಕೆರೆ ಅಭಿವೃದ್ಧಿ, ಮದ್ದೂರು ನಗರದ ರಸ್ತೆ ವಿಸ್ತರಣೆ, 220 ಕೆ.ವಿ. ಸಾಮರ್ಥ್ಯದ ಸಬ್ ಸ್ಟೇಷನ್, ಕೆಮ್ಮಣ್ಣು ನಾಲಾ ಅಭಿವೃದ್ಧಿ, ಗ್ರಾಮೀಣ ಪ್ರದೇಶಗಳ ರಸ್ತೆಗಳು, ಕುಡಿಯುವ ನೀರು ಸೇರಿದಂತೆ ಕ್ಷೇತ್ರದ ಮೂಲಸೌಕರ್ಯಗಳನ್ನು ಒದಗಿಸುವಲ್ಲಿ ಶಾಸಕ ಕೆ.ಎಂ. ಉದಯ್ ಶಕ್ತಿ ಮೀರಿ ಶ್ರಮಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಶ್ರೀರಂಗಪಟ್ಟಣ ಶಾಸಕ, ಸೆಸ್ಕ್ ಅಧ್ಯಕ್ಷ ರಮೇಶ್ ಬಾಬು ಬಂಡಿಸಿದ್ದೇಗೌಡ ಮತ್ತು ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಮಾತನಾಡಿದರು.

ಗ್ಯಾರಂಟಿ ಯೋಜನೆಗಳ ತಾಲ್ಲೂಕು ಘಟಕದ ಅಧ್ಯಕ್ಷ ಬಿ. ಬಸವರಾಜು, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಹಾಗೂ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಲುವರಾಜು, ಡಿಸಿಸಿ ಬ್ಯಾಂಕ್ ನಿರ್ದೇಶಕ ಸಂದರ್ಶ್, ಗ್ರಾ.ಪಂ. ಮಾಜಿ ಅಧ್ಯಕ್ಷ ಸಿ.ಟಿ. ಶಂಕರ್, ಗುತ್ತಿಗೆದಾರ ಶಿವಶಂಕರ್, ತೈಲೂರು ರಘು, ಕಿಸಾನ್ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ದೇಶಹಳ್ಳಿ ಮೋಹನ್ ಕುಮಾರ್, ಭಾರತೀನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜೀವ್, ಮುನ್ ಮುಲ್ ನಿರ್ದೇಶಕ ಹರೀಶ್ ಬಾಬು, ಮಹಿಳಾ ಘಟಕದ ಅಧ್ಯಕ್ಷೆ ಮಮತಾ ಶಂಕರೇಗೌಡ, ಸೆಸ್ಕ್ ಎಸ್.ಇ. ವೆಂಕಟೇಶ್, ಇಇ ಕಿಶೋರ್, ಇಇ ಶಿವಕುಮಾರ್, ಇಇ ಕಿರಣ್, ನಗರಸಭಾ ಪೌರಾಯುಕ್ತೆ ರಾಧಿಕಾ ಇದ್ದರು.

ಅಭಿವೃದ್ಧಿ ಸಹಿಸದೆ ಅಪಪ್ರಚಾರ: ಉದಯ್ ಶಾಸಕ ಕೆ.ಎಂ.ಉದಯ್ ಅಧ್ಯಕ್ಷತೆ ವಹಿಸಿ ಮಾತನಾಡಿ ‘ಕ್ಷೇತ್ರದಲ್ಲಿ ಕಳೆದ 2.5 ವರ್ಷದ ಅವಧಿಯಲ್ಲಿ ₹1800 ಕೋಟಿಗೂ ಅಧಿಕ ಅನುದಾನ ತಂದು ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿರುವುದನ್ನು ಸಹಿಸದೆ ವಿರೋಧಿಗಳು ನನ್ನ ವಿರುದ್ಧ ಅನಗತ್ಯ ಅಪಪ್ರಚಾರ ಮಾಡುತ್ತಿದ್ದಾರೆ’ ಎಂದು ಬೇಸರ ವ್ಯಕ್ತಪಡಿಸಿದರು. ಈ 220 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರವು ಮುಂದಿನ ಯುಗಾದಿ ವೇಳೆಗೆ ಕಾರ್ಯಾರಂಭಗೊಂಡು ಈ ಭಾಗದ ರೈತರು ಮತ್ತು ಜನರಿಗೆ ಅನುಕೂಲವಾಗುವಂತೆ ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.