ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವಚ್ಛತೆ ಕಾಪಾಡಿಕೊಳ್ಳಲು ಜಿಪಂ ಸಿಇಒ ಸಲಹೆ

Last Updated 21 ಜುಲೈ 2020, 12:56 IST
ಅಕ್ಷರ ಗಾತ್ರ

ಮಂಡ್ಯ: ‘ಮಳೆಗಾಲ ಪ್ರಾರಂಭವಾಗಿದ್ದು, ನಮ್ಮ ಸುತ್ತಮುತ್ತಲಿನ ಸ್ಥಳಗಳಲ್ಲಿ ನೀರು ನಿಲ್ಲದಂತೆ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಜ್ವರದ ಲಕ್ಷಣ ಕಂಡು ಬಂದರೆ ತಕ್ಷಣ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯಬೇಕು’ ಎಂದು ಜಿಪಂ ಸಿಇಒ ಕೆ.ಯಾಲಕ್ಕಿಗೌಡ ಹೇಳಿದರು.

ಜಿಲ್ಲಾಡಳಿತದ ವತಿಯಿಂದ ಜಿಪಂ ಸಭಾಂಗಣದಲ್ಲಿ ಮಂಗಳವಾರ ನಡೆದ ರಾಷ್ಟ್ರೀಯ ಡೆಂಗಿ ದಿನಾಚರಣೆ ಮತ್ತು ಡೆಂಗಿ ವಿರೋಧ ಮಾಸಾಚರಣೆ ಅಂತರ ಇಲಾಖಾ ಸಮನ್ವಯ ಸಭೆಯಲ್ಲಿ ಅವರು ಮಾತನಾಡಿದರು.

‘ಮನೆ, ಕಚೇರಿ, ವಿವಿಧ ಇಲಾಖೆ, ಶಾಲೆ ಮತ್ತು ನಾಗರಿಕರು ತಾವು ಕೆಲಸ ಮಾಡುವ ಸ್ಥಳಗಳಲ್ಲಿ ನೀರು ನಿಲ್ಲದಂತೆ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಪ್ರಸ್ತುತ ಯಾವುದೇ ರೋಗ-ರುಜಿನ ಬಂದರೆ ವೈಯಕ್ತಿಕ ಎಚ್ಚರಿಕೆ ಮತ್ತು ಜಾಗೃತಿ ಹೊಂದಬೇಕು. ಮಳೆಗಾಲದಂತಹ ಸಂದರ್ಭದಲ್ಲಿ ನೀರು ಒಂದು ಕಡೆ ನಿಂತು ಅಲ್ಲಿ ಸೊಳ್ಳೆಗಳು ಉತ್ಪತ್ತಿಯಾಗಿ ಡೆಂಗಿ, ಚಿಕೂನ್‌ಗುನ್ಯಾ, ಮಲೇರಿಯಾದಂತಹ ಕಾಯಿಲೆಗಳು ಹರಡಿ ರೋಗ ನಿರೋಧಕ ಶಕ್ತಿ ಕಡಿಮೆಯಾಗುವ ಸಾಧ್ಯತೆ ಇರುತ್ತದೆ. ವಯಸ್ಸಾದವರು, ಗರ್ಭಿಣಿಯರು ಮತ್ತು ಮಕ್ಕಳ ಮೇಲೆ ನಿಗಾ ಇಟ್ಟು ಅವರ ಆರೋಗ್ಯ ಕಾಪಾಡಬೇಕು’ ಎಂದರು.

ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಭವಾನಿ ಶಂಕರ್ ಮಾತನಾಡಿ ‘ನೀರು ಸಂಗ್ರಹಿಸುವ ವಸ್ತುಗಳಿಗೆ ಸೊಳ್ಳೆಗಳು ಒಳಗೆ ನುಸುಳದಂತೆ ಮುಚ್ಚಳ ಮುಚ್ಚಬೇಕು, ಸೊಳ್ಳೆ ನಿರೋಧಕ, ಸೊಳ್ಳೆ ಪರದೆಯನ್ನು ಬಳಸುವುದು ಹಾಗೂ ಮೈತುಂಬ ಬಟ್ಟೆ ಧರಿಸಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು’ ಎಂದು ಸಲಹೆ ನೀಡಿದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಚ್.ಪಿ.ಮಂಚೇಗೌಡ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಸಿದ್ದಲಿಂಗೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT