ಮಳವಳ್ಳಿ: ಬಿ.ಆರ್.ಅಂಬೇಡ್ಕರ್ ಅವರನ್ನು ಒಂದು ಜಾತಿ ಹಾಗೂ ಮತಕ್ಕೆ ಸೀಮಿತಗೊಳಿಸುವ ಕ್ಷುಲ್ಲಕ ಮನಸ್ಥಿತಿಯಿಂದ ಹೊರ ಬಂದು ಅವರನ್ನು ವಿಶ್ವಮಾನವರಾಗಿ ನಾವು ನೋಡಬೇಕು ಎಂದು ವಿಶ್ವಮಾನವ ವಿಚಾರ ವೇದಿಕೆಯ ಅಧ್ಯಕ್ಷ ಬಿ.ಮಹದೇವು ಹೇಳಿದರು.

ಪಟ್ಟಣದ ವಿಶ್ವಮಾನವ ವಿಚಾರ ವೇದಿಕೆಯ ಕಚೇರಿಯಲ್ಲಿ ಈಚೆಗೆ ಆಯೋಜಿಸಿದ್ದ ಬಿ.ಆರ್.ಅಂಬೇಡ್ಕರ್ ಅವರ ಜಯಂತ್ಯುತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ದೇಶದ ಘನತೆಯನ್ನು ಉತ್ತುಂಗಕ್ಕೆ ಎತ್ತರಿಸಿ ಈ ದೇಶದ ನಾಗರಿಕರಿಗೆ ಗರ್ಭದಿಂದ ಗೋರಿಯವರೆಗೂ ಹಕ್ಕುಗಳನ್ನು ಸ್ಥಾಪಿಸುವುದರ ಮೂಲಕ ಶ್ರೇಷ್ಠ ಸಂವಿಧಾನವನ್ನು ನೀಡಿದ ಕೀರ್ತಿ ಅಂಬೇಡ್ಕರ್ ಅವರಿಗೆ ಸಲ್ಲುತ್ತದೆ. ಇಂತಹ ಮಹನೀಯರನ್ನು ಸ್ಮರಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ’ ಎಂದು ಅಭಿಪ್ರಾಯಪಟ್ಟರು.

‘ಜಗತ್ತಿನಲ್ಲಿಯೇ ಶ್ರೇಷ್ಠ ಸಂವಿಧಾನವನ್ನು ನೀಡುವ ಮೂಲಕ ಪ್ರಜಾಪ್ರಭುತ್ವಕ್ಕೆ ಬುನಾದಿ ಹಾಕಿದ ಅಂಬೇಡ್ಕರ್ ಅವರ ಪರಿಶ್ರಮವನ್ನು ಶ್ಲಾಘಿಸಲು ಬರಿ ಪ್ರತಿಮೆ ನಿರ್ಮಿಸಿದರೆ ಸಾಲದು. ಬದಲಾಗಿ ಅವರ ವಿಚಾರಧಾರೆಗಳನ್ನು ಅಳವಡಿಸಿಕೊಂಡು ಅವರ ಕನಸಿನ ಭಾರತ ಕಟ್ಟಲು ಸಾಧ್ಯವಾಗುತ್ತದೆ’ ಎಂದು ಹೇಳಿದರು.

ವೇದಿಕೆಯ ಪ್ರಧಾನ ಕಾರ್ಯದರ್ಶಿ ಎನ್.ಎಲ್.ಭರತ್ ರಾಜ್, ಮುಖಂಡರಾದ ಸುರೇಶ್, ದಯಾಶಂಕರ್, ಚೇತನ್ ಕುಮಾರ್, ಮಲ್ಲಿಕಾರ್ಜುನಸ್ವಾಮಿ, ಎಂ.ಇ.ಮಹದೇವು, ಎಂ.ನಾಗೇಶ್, ದೊಡ್ಡಮರಿಗೌಡ, ಚುಂಚಣ್ಣ, ಪುಟ್ಟಮಂಚಮ್ಮ, ಲೋಕೇಶ್, ಮಲ್ಲಿಕಾರ್ಜುನ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-40-2093112275

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.