ಮಳವಳ್ಳಿ: ಬಿ.ಆರ್.ಅಂಬೇಡ್ಕರ್ ಸೇರಿದಂತೆ ಮಹನೀಯರ ಜಯಂತಿಗಳನ್ನು ಬರೀ ಆಚರಣೆ ಸೀಮತಗೊಳಿಸದೇ ಅವರ ತತ್ವ ಆದರ್ಶಗಳನ್ನು ಪಾಲನೆ ಮಾಡಬೇಕು ಎಂದು ಅಭಿಯೋಜನೆ ಇಲಾಖೆ ಉಪ ನಿರ್ದೇಶಕ ಯೋಗೇಶ್ವರ್ ತಿಳಿಸಿದರು.

ತಾಲ್ಲೂಕಿನ ಕಿರುಗಾವಲು ಹೋಬಳಿಯ ಹೊನಗನಹಳ್ಳಿ ಗ್ರಾಮದಲ್ಲಿ ನಡೆದ ಬಿ.ಆರ್.ಅಂಬೇಡ್ಕರ್ ಜಯಂತಿ ಅಂಗವಾಗಿ ಅಂಬೇಡ್ಕರ್ ಪುತ್ಥಳಿಗೆ ಪುಷ್ಪಾರ್ಚನೆ ಮಾಡಿ ಅವರು ಮಾತನಾಡಿದರು.

‘ಪ್ರತಿವರ್ಷ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಗಳನ್ನು ಸಡಗರ ಸಂಭ್ರಮದಿಂದ ಆಚರಣೆ ಮಾಡಿಕೊಂಡು ಬರಲಾಗುತ್ತಿದೆ. ಎಲ್ಲ ಮಹನೀಯರ ಜಯಂತಿಗಳು ಒಂದು ದಿನಕ್ಕೆ ಸೀಮಿತವಾಗುವ ಬದಲು ಶಾಶ್ವತವಾಗಿ ಬುದ್ಧ, ಬಸವ, ಅಂಬೇಡ್ಕರ್ ಅವರು ನಮ್ಮ ಮನಸ್ಸಿನಲ್ಲಿ ಉಳಿಯುವ ನಿಟ್ಟಿನಲ್ಲಿ ಅವರ ವಿಚಾರಧಾರೆಗಳನ್ನು ತಿಳಿಯಬೇಕಿದೆ’ ಎಂದು ಹೇಳಿದರು.

ಪೋಷಕರು ತಮ್ಮ ಮಕ್ಕಳಿಗೆ ಕನಿಷ್ಠ ಆರು ಗಂಟೆಗಳ ಕಾಲ ಓದಿಸುವ ಅಭ್ಯಾಸವನ್ನು ರೂಢಿಸಬೇಕು ಎಂದರು.

ಮೈಸೂರು ಜಿಲ್ಲಾ ನಗರ ಅಭಿವೃದ್ಧಿ ಕೋಶ ಕಾರ್ಯಪಾಲಕ ಎಂಜಿನಿಯರ್ ಕೆ.ಎಂ.ರವಿಕುಮಾರ್ ಮಾತನಾಡಿ, ‘ಅಂಬೇಡ್ಕರ್ ಅವರು ನೀಡಿರುವ ಸಂವಿಧಾನವನ್ನು ನಾವೆಲ್ಲರೂ ಉಳಿಸಿಕೊಂಡು ಹೋಗಬೇಕು’ ಎಂದು ಕರೆ ನೀಡಿದರು.

ಲೋಕೋಪಯೋಗಿ ಇಲಾಖೆ ಎಚ್.ಪಿ.ಮಹದೇವು, ಮೈಸೂರು ಕಾನೂನು ಸೇವಾ ಪ್ರಾಧಿಕಾರದ ಆನಂದ್, ಅರಣ್ಯ ಇಲಾಖೆಯ ಎಂ.ಗೋಪಾಲ್, ತಾ.ಪಂ.ಮಾಜಿ ಅಧ್ಯಕ್ಷ ಬಿ.ಮಹದೇವಸ್ವಾಮಿ, ಮುಖಂಡರಾದ ಪುಟ್ಟರಾಜು, ಹನುಮಂತ, ಎನ್.ಮಹದೇವು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-40-128070297

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.