ಮಳವಳ್ಳಿ: ಅಸ್ಪೃಶ್ಯತೆ ಮತ್ತು ಸಾಮಾಜಿಕ ಅಸಮಾನತೆಯ ವಿರುದ್ಧ ಹೋರಾಡಿದ ಡಾ.ಬಿ.ಆರ್.ಅಂಬೇಡ್ಕರ್ ಅವರ ತತ್ವ, ಆದರ್ಶಗಳು ಎಲ್ಲರಿಗೂ ಮಾದರಿಯಾಗಿವೆ ಎಂದು ಹಲಗೂರು ಸಿಪಿಐ ಬಿ.ಎಸ್.ಶ್ರೀಧರ್ ಹೇಳಿದರು.

ತಾಲ್ಲೂಕಿನ ಶೆಟ್ಟಹಳ್ಳಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಯುವಕರ ಸಂಘದಿಂದ ಈಚೆಗೆ ಆಯೋಜಿಸಿದ್ದ ‘ಅಂಬೇಡ್ಕರ್ ಹಬ್ಬ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಅಂಬೇಡ್ಕರ್ ಅವರ ಆಶಯಗಳನ್ನು ಈಡೇರಿಸಬೇಕಾದರೆ ಪ್ರತಿಯೊಬ್ಬ ಪೋಷಕರೂ ತಮ್ಮ ಮಕ್ಕಳನ್ನು ಶಿಕ್ಷಣವಂತರಾಗಿ ಮಾಡಬೇಕು. ಶಿಕ್ಷಣ ಸಂಘಟನೆ ಹೋರಾಟದ ಮೂಲಕ ತಮ್ಮ ಹಕ್ಕುಗಳನ್ನು ಪಡೆಯಬೇಕು ಎನ್ನುವುದನ್ನು ಅಂಬೇಡ್ಕರ್ ಅವರು ತೋರಿಸಿದ ದಾರಿಯಲ್ಲಿ ಎಲ್ಲರೂ ಸಾಗಬೇಕಿದೆ’ ಎಂದು ಸಲಹೆ ನೀಡಿದರು.

‘ಅಕ್ಕ’ ಐಎಎಸ್ ಅಕಾಡಮಿ ಮುಖ್ಯಸ್ಥ ಶಿವಕುಮಾರ್ ಮಾತನಾಡಿ, ‘ಅಂಬೇಡ್ಕರ್ ಅವರ ಜಯಂತಿ ಕೇವಲ ಜನ್ಮದಿನದ ಆಚರಣೆಯಲ್ಲ. ಅದು ಜ್ಞಾನ, ಸಮಾನತೆ ಹಾಗೂ ಸಾಮಾಜಿಕ ನ್ಯಾಯದ ಸಂಕೇತವಾಗಿದೆ’ ಎಂದು ಹೇಳಿದರು.

ಭಾರತೀಯ ಬೌದ್ಧ ಮಹಾಸಭಾದ ಯುವ ಘಟಕದ ರಾಜ್ಯ ಅಧ್ಯಕ್ಷ ದರ್ಶನ್ ಬಿ.ಸೋಮಶೇಖರ್ ಮಾತನಾಡಿದರು.

ನಿವೃತ್ತ ಕೃಷಿ ಸಹ ಪ್ರಾಧ್ಯಾಪಕ ಎಂ.ವೆಂಕಟೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪಿಯು ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಭೀಮಾರಥ ಮೆರವಣಿಗೆ ಜಾನಪದ ಕಲಾತಂಡ ಹಾಗೂ ಪೂರ್ಣಕುಂಭದೊಂದಿಗೆ ಅದ್ದೂರಿಯಾಗಿ ನಡೆಯಿತು. ಗ್ರಾಮದಲ್ಲಿ ಅಳವಡಿಸಿದ ವಿದ್ಯುತ್ ದೀಪಾಲಂಕಾರ, ಕಲ್ಕುಣಿ ಯೂತ್ ಮೆಲೋಡಿಸ್ ತಂಡದ ಭೀಮಾ ಗೀತಗಾಯನ, ಪ್ರಿಯಾ ಎನ್.ರಾಜು, ಎಂ.ಪಿ.ರಕ್ಷಿತಾ ಅವರ ಭರತನಾಟ್ಯ, ಶಿವ ಡ್ಯಾನ್ಸ್ ಕ್ಲಾಸ್ ತಂಡದ ನೃತ್ಯ ಕಾರ್ಯಕ್ರಮಗಳು ಗಮನ ಸೆಳೆದವು.

ಮುಖಂಡರಾದ ಶಿವಕುಮಾರ್, ಚಂದ್ರರಾಜೇ ಅರಸ್, ನಾಗರಾಜು, ಜಗದೀಶ್, ನವೀನ್, ರವಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-40-1124601605

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.