ಮಳವಳ್ಳಿ: ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಏಪ್ರಿಲ್ 20ರಂದು ಬಸವ ಜಯಂತಿ ಆಚರಣೆಗೆ ಸಂಬಂಧಿಸಿದಂತೆ ತಹಶೀಲ್ದಾರ್ ಎಸ್.ವಿ.ಲೋಕೇಶ್ ಅಧ್ಯಕ್ಷತೆಯಲ್ಲಿ ಶುಕ್ರವಾರ ಪೂರ್ವಭಾವಿ ಸಭೆ ನಡೆಯಿತು.

ತಹಶೀಲ್ದಾರ್ ಎಸ್.ವಿ.ಲೋಕೇಶ್ ಮಾತನಾಡಿ, ‘ಏ.20ರಂದು ತಾ.ಪಂ.ಕಚೇರಿ ಆವರಣದಿಂದ ಡಾ.ಬಿ.ಆರ್.ಅಂಬೇಡ್ಕರ್ ಭವನದವರೆಗೆ ವಿವಿಧ ಜಾನಪದ ಕಲಾತಂಡಗಳೊಂದಿಗೆ ಬಸವಣ್ಣ ಅವರ ಭಾವಚಿತ್ರ ಮೆರವಣಿಗೆ ನಡೆಯಲಿದೆ. ಎಲ್ಲರ ಸಹಕಾರ ಇರಲಿ’ ಎಂದು ಹೇಳಿದರು.

ಸಭೆಯಲ್ಲಿ ತಾ.ಪಂ.ಮಾಜಿ ಅಧ್ಯಕ್ಷ ಕೆ.ಎಸ್.ಪ್ರಕಾಶ್ ಮಾತನಾಡಿ, ‘ಬಸವ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲು ಸಿದ್ಧತೆ ಮಾಡಿಕೊಳ್ಳಬೇಕು’ ಎಂದರು.

ಮನ್ಮುಲ್ ನಿರ್ದೇಶಕ ಆರ್.ಎನ್.ವಿಶ್ವಾಸ್ ಮಾತನಾಡಿ, ‘ಬಸವ ಜಯಂತಿಯನ್ನು ವಿಜೃಂಭಣೆಯಿಂದ ಆಚರಣೆ ಮಾಡಲು ಎಲ್ಲ ಸಮುದಾಯ ಹಾಗೂ ಸಂಘ ಸಂಸ್ಥೆಗಳು ಕೈಜೋಡಿಸಬೇಕು’ ಎಂದು ಮನವಿ ಮಾಡಿದರು.

ಎಪಿಎಂಸಿ ಮಾಜಿ ಅಧ್ಯಕ್ಷ ಮುಟ್ಟನಹಳ್ಳಿ ಅಂಬರೀಶ್, ಪುರಸಭೆ ಮಾಜಿ ಅಧ್ಯಕ್ಷ ಎಂ.ಎಸ್.ದಯಾಶಂಕರ್, ಮುಖಂಡ ಬಬ್ರುವಾಹನ ಮಾತನಾಡಿ, ಎಲ್ಲ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ಸೂಚನೆ ನೀಡಬೇಕು ಎಂದು ತಹಶೀಲ್ದಾರ್ ಅವರಿಗೆ ಮನವಿ ಮಾಡಿದರು. ತಾ.ಪಂ.ಮಾಜಿ ಉಪಾಧ್ಯಕ್ಷ ಸಿ.ಮಾಧು ಮಾತನಾಡಿ, ಪೂರ್ವಾಭಾವಿ ಸಭೆಗೆ ಗೈರಾದ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ವಹಿಸಬೇಕು ಎಂದು ಆಗ್ರಹಿಸಿದರು.

ತಹಶೀಲ್ದಾರ್ ಎಸ್.ವಿ.ಲೋಕೇಶ್ ಮಾತನಾಡಿ, ಸಭೆಗೆ ಬಾರದ ಅಧಿಕಾರಿಗಳ ವಿರುದ್ಧ ಮೇಲಾಧಿಕಾರಿಗಳಿಗೆ ವರದಿ ನೀಡಲಾಗುವುದು ಎಂದರು. ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಇ.ಉಮಾ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-40-1150027175

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.