ಮಳವಳ್ಳಿ: ಮೇಲು– ಕೀಳು ಎನ್ನದೇ ಎಲ್ಲರನ್ನೂ ಸಮಾನವಾಗಿ ಕಾಣಬೇಕು ಎನ್ನುವ ಬಸವಣ್ಣ ಅವರ ತತ್ವ ಆದರ್ಶಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು ಎಂದು ತಹಶೀಲ್ದಾರ್ ಎಸ್.ವಿ.ಲೋಕೇಶ್ ಸಲಹೆ ನೀಡಿದರು.

ತಾಲ್ಲೂಕು ಆಡಳಿತದಿಂದ ಆಯೋಜಿ ಸಿದ್ದ ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ವಿಶ್ವಗುರು ಬಸವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮೈಸೂರಿನ ಸಾಹಿತಿ, ಸಂಶೋಧಕ ರಾಜಶೇಖರ ಜಮದಂಡಿ ಮಾತನಾಡಿ, ‘900 ವರ್ಷಗಳ ಹಿಂದೆಯೇ ಮೂಢ ನಂಬಿಕೆ, ಕಂದಾಚಾರ, ಜಾತಿಯನ್ನು ಹೋಗಲಾಡಿಸಲು ಹೋರಾಟ ನಡೆಸಿದ ಬಸವಣ್ಣ ಅವರು ವಿಶ್ವಕ್ಕೆ ಮಾದರಿಯಾಗಿ ರೂಪುಗೊಂಡಿದ್ದಾರೆ’ ಎಂದರು.

ತಾ.ಪಂ.ಇಒ ಎಚ್.ಜಿ.ಶ್ರೀನಿವಾಸ್ ಮಾತನಾಡಿ, ‘ಸಮಾನತೆ ಪ್ರತಿಪಾದಿಸಿದ ಬಸವಣ್ಣ ಅವರನ್ನು ಪ್ರತಿಯೊಬ್ಬರು ಅನುಸರಿಸಿದರೇ ಜಾತಿ ವ್ಯವಸ್ಥೆಯೇ ಇಲ್ಲದಂತಾಗುತ್ತದೆ’ ಎಂದು ಹೇಳಿದರು.

ಪಿಯು ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಪಡೆದ ಐವರು ವಿದ್ಯಾರ್ಥಿಗಳು ಹಾಗೂ ಎನ್ಎಂಎಂಎಸ್ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಎಂ.ಎನ್.ನಂದೀಶ್ ಕುಮಾರ್ ಅವರನ್ನು ಅಭಿನಂದಿಸಲಾಯಿತು.

ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಈ.ಉಮಾ, ಪುರಸಭೆ ಮುಖ್ಯಾಧಿಕಾರಿ ಎಂ.ಸಿ.ನಾಗರತ್ನ, ಲೋಕೋಪಯೋಗಿ ಇಲಾಖೆಯ ಎಇಇ ಎ.ಎಂ. ಸೋಮಶೇಖರ್, ವಿವಿಧ ಇಲಾಖೆಯ ಅಧಿಕಾರಿಗಳಾದ ನಿತೀಶ್, ರಂಗಸ್ವಾಮಿ, ಅಪ್ಪಣಬೋವಿ, ವಿನೋದ್, ಪಿಎಸ್ಐ ಶಿವಲಿಂಗ ದಳವಾಯಿ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ತಾಲ್ಲೂಕು ಘಟಕದ ಅಧ್ಯಕ್ಷ ಮೂರ್ತಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260422-40-1101797656

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.