ಮಳವಳ್ಳಿ: ದಲಿತ ಸಮುದಾಯದ ಮತ ಪಡೆದು ಅಧಿಕಾರಕ್ಕೆ ಬಂದ ಕಾಂಗ್ರೆಸ್ ದಲಿತರಿಗೆ ಮುಖ್ಯಮಂತ್ರಿ ಸ್ಥಾನ ನೀಡದೇ ದಲಿತರಿಗೆ ಅನ್ಯಾಯ ಮಾಡುತ್ತಿದೆ ಎಂದು ಬಿಎಸ್ಪಿ ರಾಜ್ಯ ಘಟಕದ ಅಧ್ಯಕ್ಷ ಎಂ.ಕೃಷ್ಣಮೂರ್ತಿ ಆರೋಪಿಸಿದರು.

ಪಟ್ಟಣದ ಬಹುಜನ ಸಮಾಜ ಪಕ್ಷದ ಕಚೇರಿಯಲ್ಲಿ ಗುರುವಾರ ಅವರು ಮಾತನಾಡಿ, ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ಮೂರು ವರ್ಷಗಳ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಿ ಅಧಿಕಾರ ಹಸ್ತಾಂತರಿಸಲು ಹೊರಟಿದೆ. ಸಿದ್ದರಾಮಯ್ಯ ಅವರ ನಂತರ ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲು ಹೊರಟಿದ್ದಾರೆ. ಆದರೆ, ರಾಜ್ಯದಲ್ಲಿ ಸ್ವಾತಂತ್ರ್ಯ ಬಂದ ದಿನಗಳಿಂದಲೂ ಕಾಂಗ್ರೆಸ್ ಗೆ ಶೇ 90ರಷ್ಟು ಮತ ನೀಡುತ್ತಿರುವ ದಲಿತರಿಗೆ ಮುಖ್ಯಮಂತ್ರಿ ಹುದ್ದೆ ನೀಡದೆ ವಂಚಿಸುತ್ತಿದೆ ಎಂದು ಕಿಡಿ ಕಾರಿದರು.

ದೇಶ ಹಾಗೂ ರಾಜ್ಯದಲ್ಲಿ ದಲಿತರನ್ನು ಕಾಂಗ್ರೆಸ್ ಬರೀ ಮತ ಬ್ಯಾಂಕ್ ಆಗಿ ಬಳಸಿಕೊಂಡು ದಲಿತ ಸಮುದಾಯಕ್ಕೆ ಅನ್ಯಾಯ ಮಾಡುತ್ತಿದೆ. ಬಿ.ರಾಚಯ್ಯ ಮತ್ತು ಬಸವಲಿಂಗಪ್ಪ ಅವರಿಗೆ ವಂಚಿಸಿದ ಕಾಂಗ್ರೆಸ್ ಇದೀಗ ಮಲ್ಲಿಕಾರ್ಜನ ಖರ್ಗೆ ಮತ್ತು ಪರಮೇಶ್ವರ್ ಅವರನ್ನು ಮುಖ್ಯಮಂತ್ರಿ ಮಾಡದೇ ಮೋಸ ಮಾಡಿದೆ. ರಾಜ್ಯದ ದಲಿತ ಸಮುದಾಯ ಕಾಂಗ್ರೆಸ್ಗೆ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಲು ಮುಂದಾಗಬೇಕು ಎಂದರು.

ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳಲ್ಲೂ ಇದೆ ಕಥೆಯಾಗಿದೆ. ದಲಿತರು ಮತ್ತು ಮುಸ್ಲಿಮರನ್ನು ಮತಬ್ಯಾಂಕ್ ಆಗಿ ಬಳಸಿಕೊಂಡು ಅಧಿಕಾರ ಮಾಡುವ ಈ ಮೂರು ಪಕ್ಷಗಳು ವಂಚಿಸುತ್ತಿವೆ ಎಂದರು.

ರಾಜ್ಯ ಸರ್ಕಾರ ವಿದ್ಯುತ್ ವಿತರಣೆಯನ್ನು ಖಾಸಗಿಕರಣ ಮಾಡಬಾರದು. ಇದರಿಂದ ಲಕ್ಷಾಂತರ ಮಂದಿ ಉದ್ಯೋಗ ಕಳೆದುಕೊಳ್ಳಲಿದ್ದಾರೆ. ರೈತರ ಪಂಪ್ಸೆಟ್ಗಳಿಗೆ ನೀಡುತ್ತಿರುವ ಉಚಿತ ವಿದ್ಯುತ್ ನಿಲ್ಲಿಸುವ ಹುನ್ನಾರ ಇದರಲ್ಲಿ ಅಡಗಿದೆ. ಖಾಸಗಿಕರಣ ವಿರೋಧಿಸಿ ಇಲಾಖೆ ನೌಕರರ ಪರವಾಗಿ ಬಿಎಸ್ಪಿ ಹೋರಾಟ ನಡೆಸುತ್ತದೆ ಎಂದು ಎಚ್ಚರಿಸಿದರು.

ತಾಲ್ಲೂಕು ಆಡಳಿತ ಸಂಪೂರ್ಣ ಕುಸಿದಿದೆ. ಉಪ ಲೋಕಾಯುಕ್ತರು ತಹಶೀಲ್ದಾರ್ ವಿರುದ್ಧ ಕಿಡಿಕಾರಿದ್ದಾರೆ. ಸ್ಥಳೀಯ ಶಾಸಕರು ಅಧಿಕಾರಿಗಳಿಗೆ ಗಟ್ಟಿ ಧ್ವನಿಯಲ್ಲಿ ಮಾತನಾಡುವವರ ವಿರುದ್ಧ ಕೇಸ್ ಹಾಕಿ ಅಂತ ಹೇಳುವ ಮೂಲಕ ಸರ್ಕಾರಿ ಅಧಿಕಾರಿಗಳ ಪರ ನಿಲ್ಲಬಾರದು ಎಂದು ಹೇಳಿದರು.

ಬಿಎಸ್ಪಿ ರಾಜ್ಯ ಉಸ್ತುವಾರಿ ಹ.ರಾ.ಮಹೇಶ್, ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಶಿವಶಂಕರ್, ಉಪಾಧ್ಯಕ್ಷ ಚೆಲುವರಾಜು, ತಾಲ್ಲೂಕು ಘಟಕದ ಅಧ್ಯಕ್ಷ ವಿ.ನಂಜುಂಡಸ್ವಾಮಿ, ಮುಖಂಡರಾದ ಬಿ.ಡಿ.ರಾಜೇಂದ್ರ, ಎಚ್.ಎನ್.ವೀರಭದ್ರಯ್ಯ, ಸುಧಾಕರ್, ಎನ್.ದೇವರಾಜು, ಬಿ.ಎಸ್.ತಮ್ಮಯ್ಯ, ಶಿವಮೂರ್ತಿ, ಕೆ.ಎಸ್.ಮಹೇಶ್, ಮಾಯಪ್ಪ ಗೌಡ, ಲೊಕೇಶ್ ಗೌಡ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-40-456670853

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.