ಮಳವಳ್ಳಿ: ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿರುವುದರಿಂದ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಮೂಡಿದ್ದು, ಇದ್ದರಿಂದ ಕಾಂಗ್ರೆಸ್ ಮತ್ತಷ್ಟು ಸದೃಢಗೊಳ್ಳಲಿದೆ ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘2023ರ ಚುನಾವಣೆಯಲ್ಲಿ ಕಾಂಗ್ರೆಸ್ಅನ್ನು ಯಶಸ್ವಿಯಾಗಿ ಮುನ್ನಡೆಸಿರುವ ಜೋಡಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್. ಈ ಅವಧಿಯಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿದ್ದರಿಂದ ಕಾರ್ತಕರ್ತರಲ್ಲಿ ಹೊಸ ಹುಮ್ಮಸ್ಸು ಬಂದಿದೆ. ಪಕ್ಷದಲ್ಲಿ ಐಕ್ಯತೆ, ಬದ್ಧತೆ ಮತ್ತು ಸಹೋದರತ್ವತೆ ಹೇಗಿದೆ ಎನ್ನುವುದಕ್ಕೆ ಸಿದ್ದರಾಮಯ್ಯ ಅವರು ನಡೆದುಕೊಂಡ ರೀತಿ ಸಾಕ್ಷಿಯಾಗಿದೆ’ ಎಂದು ಬಣ್ಣಿಸಿದರು.

ಸಚಿವ ಸ್ಥಾನದ ಬಗ್ಗೆ ಪ್ರತಿಕ್ರಿಯಿಸಿದ ಪಿ.ಎಂ.ನರೇಂದ್ರಸ್ವಾಮಿ, ಅದು ಪಕ್ಷದ ಹೈಕಮಾಂಡ್ಗೆ ಬಿಟ್ಟ ತೀರ್ಮಾನವಾಗಿದೆ ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸಿ.ಪಿ.ರಾಜು, ದೊಡ್ಡಯ್ಯ, ಮನ್ಮುಲ್ ನಿರ್ದೇಶಕ ಡಿ.ಕೃಷ್ಣೇಗೌಡ, ಟಿಎಪಿಸಿಎಂಎಸ್ ಎಂ.ಲಿಂಗರಾಜು, ನಿರ್ದೇಶಕರಾದ ಕೆ.ಜೆ.ದೇವರಾಜು, ಬಿ.ಪುಟ್ಟಬಸವಯ್ಯ, ದಿಲೀಪ್ ಕುಮಾರ್ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-40-605972373

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.