ಮಳವಳ್ಳಿ: ತಾಲ್ಲೂಕಿನ ಕಂದೇಗಾಲ ಗ್ರಾಮ ರೈತ ಕೆ.ವಿ.ನಂದೀಶ್ (31) ಮತ್ತು ಹೆಬ್ಬಣಿ ಗ್ರಾಮದ ಮಹದೇವಪ್ಪ(52) ಸಾಲದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಲೇಟ್ ವೆಂಕಟೇಶ್ ಎಂಬುವರ ಪುತ್ರ ಕೆ.ವಿ.ನಂದೀಶ್ ಗ್ರಾಮದ ತಮ್ಮ ಜಮೀನಿನಲ್ಲಿ ವ್ಯವಸಾಯ ಮಾಡುತ್ತಿದ್ದರು. ಬ್ಯಾಂಕ್, ಮಹಿಳಾ ಸ್ವಸಹಾಯ ಸಂಘ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಸೇರಿ ಹಲವೆಡೆ ಸಾಲ ಮಾಡಿದ್ದರು. ವ್ಯವಸಾಯದಲ್ಲಿ ನಷ್ಟ ಅನುಭವಿಸಿ, ಇತ್ತೀಚೆಗೆ ಬೆಂಗಳೂರಿನಲ್ಲಿ ಕೆಲಸಕ್ಕೆ ಸೇರಿದ್ದರು ಎನ್ನಲಾಗಿದೆ.

ಬೆಂಗಳೂರಿನ ಕೊಡಿಗೇಹಳ್ಳಿಯ ಭದ್ರಪ್ಪ ಲೇಔಟ್ನಲ್ಲಿ ಬಾಡಿಗೆ ಮನೆಯಲ್ಲಿ ಎರಡು ದಿನಗಳ ಹಿಂದೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆ ಮಾಲೀಕರು ಗಮನಿಸಿದಾಗ ಪ್ರಕರಣ ಗೊತ್ತಾಗಿದೆ. ರೈತನ ಸಹೋದರಿ ನಂದಿನಿ ದೂರು ನೀಡಿದ್ದು, ಕೋಡಿಗೆಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೆಬ್ಬಣಿ ಗ್ರಾಮದ ಬಸವೇಶ್ವರ ದೇವಸ್ಥಾನದ ಅರ್ಚಕರೂ ಆಗಿದ್ದ ಮಹದೇವಪ್ಪ ಕೃಷಿಕರಾಗಿದ್ದರು. ಮಂಗಳವಾರ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಏಳು ಎಕರೆ ಜಮೀನಿನಲ್ಲಿ ವ್ಯವಸಾಯ ಮಾಡಲು ತಾಲ್ಲೂಕಿನ ಪಂಡಿತಹಳ್ಳಿ ಕೃಷಿಪತ್ತಿನ ಸಹಕಾರ ಸಂಘದಲ್ಲಿ ₹60 ಸಾವಿರ, ಕುರಿಸಾಕಾಣಿಕೆಗೆ ₹1.20 ಲಕ್ಷ ಸೇರಿ ₹6 ಲಕ್ಷಕ್ಕೂ ಅಧಿಕ ಸಾಲ ಮಾಡಿದ್ದರು. ಮಳೆಯ ಅಭಾವದಿಂದಾಗಿ ರಾಗಿ ಬೆಳೆಯಲ್ಲಿ ನಷ್ಟ ಹಾಗೂ ಅನಾರೋಗ್ಯದ ಸಮಸ್ಯೆಗಳಿಂದ ಸಾಲ ತೀರಿಸಲಾಗದೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಮೃತರ ಪತ್ನಿ ದಾಕ್ಷಾಯಿಣಿ ದೂರು ನೀಡಿದ್ದು, ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-40-2064503021

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.