ಮಳವಳ್ಳಿ: ‘ಜನಸಾಮಾನ್ಯರ ಬದುಕಿಗೆ ಆಶಾಕಿರಣವಾಗಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳಿಗೆ ಮೂರು ವರ್ಷಗಳಲ್ಲಿ ಮಳವಳ್ಳಿ ತಾಲ್ಲೂಕಿಗೆ ₹679.24 ಕೋಟಿ ರೂ.ಹಣವನ್ನು ವೆಚ್ಚ ಮಾಡಲಾಗಿದೆ’ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ, ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ತಿಳಿಸಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಗ್ಯಾರಂಟಿ ಯೋಜನೆಗಳ ತಾಲ್ಲೂಕು ಮಟ್ಟದ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪಂಚ ಗ್ಯಾರಂಟಿ ಯೋಜನೆಗಳಿಗಾಗಿ ರಾಜ್ಯ ಸರ್ಕಾರ ₹1.36 ಲಕ್ಷ ಕೋಟಿ ವೆಚ್ಚ ಮಾಡಿದೆ. ಜನರ ತೆರಿಗೆ ಹಣವನ್ನು ಮತ್ತೆ ಜನರ ಅಭಿವೃದ್ಧಿಗೆ ಬಳಸುತ್ತಿದೆ ಎಂಬುವುದಕ್ಕೆ ಈ ಯೋಜನೆಗಳು ಸಾಕ್ಷಿಯಾಗಿವೆ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಇದರ ಪ್ರಚಾರಕ್ಕೆಸ್ಥಳೀಯ ಅಧಿಕಾರಿಗಳಿಗೆ ಮನವರಿಕೆ ಮಾಡುವಂತೆ ತಾ. ಪಂ. ಇಒಗೆ ಸೂಚಿಸಿದರು.

‘ಮಳವಳ್ಳಿಯಲ್ಲಿ ಶೇ 95.88ರಷ್ಟು ಜನರು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಾಗಿದ್ದಾರೆ. ಯೋಜನಾ ಸಮಿತಿಯ ಸದಸ್ಯರು ಗ್ಯಾರಂಟಿ ಯೋಜನೆಗಳ ಬಗ್ಗೆ ಅರಿವು ಮೂಡಿಸಬೇಕು. ಸಮಸ್ಯೆಗಳನ್ನು ಜಿಲ್ಲಾ ಸಮಿತಿಗೆ ತಿಳಿಸಿದರೆ ಸರ್ಕಾರದ ಹಂತದಲ್ಲಿ ಅದನ್ನು ಪರಿಹರಿಸಲು ಪ್ರಯತ್ನಿಸಲಾಗುವುದು’ ಎಂದು ತಿಳಿಸಿದರು.

ತಹಶೀಲ್ದಾರ್ ಎಸ್.ವಿ.ಲೋಕೇಶ್ ಮಾತನಾಡಿ, ‘ಪಡಿತರ ಅಂಗಡಿಗಳ ಮಾಲೀಕರ ಜೊತೆಗೆ ಸಭೆ ನಡೆಸಿ ಅನ್ನಭಾಗ್ಯದ ಅಕ್ಕಿ ಮಾರಾಟ ಮಾಡಿದರೆ ಪ್ರಕರಣ ದಾಖಲಿಸುವ ಹಾಗೂ ಪಡಿತರದಾರರು ಅಕ್ಕಿ ಮಾರಾಟ ಮಾಡಿದರೆ ಅವರ ಕಾರ್ಡ್ ರದ್ದುಗೊಳಿಸುವ ಫಲಕ ಅಳವಡಿಕೆಗೆ ಸೂಚನೆ ನೀಡಲಾಗಿದೆ. ನಾಲ್ಕೈದು ದಿನಗಳಲ್ಲಿ ಕಾರ್ಯರೂಪಕ್ಕೆ ಬರಲಿದೆ’ ಎಂದರು.

ತಾಲ್ಲೂಕು ಪಂಚಾಯತಿ ಇಒ ಎಚ್.ಜಿ.ಶ್ರೀನಿವಾಸ್ ಮಾತನಾಡಿದರು. ಸಮಿತಿ ಜಿಲ್ಲಾ ಅಧ್ಯಕ್ಷ ಚಿಕ್ಕ ಲಿಂಗಯ್ಯ, ಉಪಾಧ್ಯಕ್ಷ ರಾಜೇಂದ್ರ, ತಾಲ್ಲೂಕು ಅಧ್ಯಕ್ಷ ಪಿ.ಮಾದೇಶ್ iದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-40-1489992893

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.