ಮಳವಳ್ಳಿ: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಸಿಗುವ ವೈದ್ಯಕೀಯ ಸೌಲಭ್ಯಗಳನ್ನು ಜನರು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕು ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ಸಲಹೆ ನೀಡಿದರು.

ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಈಚೆಗೆ ₹90 ಲಕ್ಷ ವೆಚ್ಚದಲ್ಲಿ ಶವಾಗಾರ ಕಟ್ಟಡ, ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಲಿಪ್ಟ್ ಅಳವಡಿಕೆ ಹಾಗೂ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಕಳೆದ ಮೂರು ವರ್ಷಗಳಿಂದ ಸಾರ್ವಜನಿಕ ಆಸ್ಪತ್ರೆಗೆ ಹೊಸ ರೂಪ ನೀಡಲಾಗಿದೆ. ಎಲ್ಲ ವಿಭಾಗದ ಸವಲತ್ತುಗಳನ್ನು ಜನರಿಗೆ ಒದಗಿಸಲಾಗುತ್ತಿದೆ. ಗ್ರಾಮೀಣ ಪ್ರದೇಶದ ಸಾರ್ವಜನಿಕರು ವೈದ್ಯಕೀಯ ಸೇವೆಗಾಗಿ ಖಾಸಗಿ ಆಸ್ಪತೆಗಳಿಗೆ ಸಾವಿರಾರು ರೂಪಾಯಿ ಹಣ ವ್ಯಯಿಸಬೇಕಿತ್ತು. ಅಲ್ಲದೇ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ, ಮೈಸೂರು, ಬೆಂಗಳೂರು ನಗರಗಳಿಗೆ ತೆರಳುತ್ತಿದ್ದ ಪರಿಸ್ಥಿತಿಯನ್ನು ಸುಧಾರಿಸಲು ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.

ರಾಜ್ಯದ ಕೆಲ ತಾಲ್ಲೂಕಿನಲ್ಲಿ ಇರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಮಳವಳ್ಳಿಗೆ ತಂದು 100 ಮತ್ತು 30 ಹಾಸಿಗೆಯುಳ್ಳ ಸೌಲಭ್ಯವನ್ನು ಗ್ರಾಮೀಣ ಪ್ರದೇಶದ ಜನರಿಗೆ ನೀಡಲಾಗಿದೆ. ಜೊತೆಗೆ ಹಲವು ರೀತಿಯ ಶಸ್ತ್ರಚಿಕಿತ್ಸೆಗಳನ್ನು ಮಾಡಲಾಗುತ್ತಿದೆ. ಸಾಕಷ್ಟು ವರ್ಷಗಳಿಂದ ಆಸ್ಪತ್ರೆಯಲ್ಲಿ ಕೊರತೆ ಇದ್ದ ಆಧುನಿಕ ಶವಾಗಾರದ ನಿರ್ಮಾಣಕ್ಕೆ ಇದೀಗ ಚಾಲನೆ ನೀಡಲಾಗುತ್ತಿದೆ ಎಂದು ಹೇಳಿದರು.

ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಎಂ.ಡಿ.ಸಂಜಯ್, ತಾಲ್ಲೂಕು ವೈದ್ಯಾಧಿಕಾರಿ ಡಾ.ಪಿ.ವೀರಭದ್ರಪ್ಪ, ಮನ್ ಮುಲ್ ನಿರ್ದೇಶಕ ಆರ್.ಎನ್.ವಿಶ್ವಾಸ್ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-40-528350168

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.