ಮಳವಳ್ಳಿ: ಏ.5ರಂದು ಡಾ.ಬಾಬು ಜಗಜೀವನ್ ರಾಂ ಹಾಗೂ ಏ.14ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಧಿಕಾರಿಗಳು ಸಿದ್ಧತೆ ನಡೆಸಬೇಕು ಎಂದು ತಹಶೀಲ್ದಾರ್ ಎಸ್.ವಿ.ಲೋಕೇಶ್ ಸೂಚಿಸಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆಯಲಿ ರುವ ಇಬ್ಬರು ರಾಷ್ಟ್ರನಾಯಕರ ಜಯಂತಿಗಳನ್ನು ಯಶಸ್ವಿಗೊಳಿಸಲು ಎಲ್ಲ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಒಂದೊಂದು ಜವಾಬ್ದಾರಿಗಳನ್ನು ವಹಿಸಲಾಗಿದೆ. ಏ.5 ಮತ್ತು 14ರಂದು ತಾಲ್ಲೂಕು ಪಂಚಾಯಿತಿ ಸಭಾಂಗಣದಿಂದ ಪ್ರಮುಖ ರಸ್ತೆಗಳಲ್ಲಿ ಜಾನಪದ ಕಲಾ ಮೇಳದೊಂದಿಗೆ ಮಹನೀಯರ ಭಾವಚಿತ್ರಗಳ ಮೆರವಣಿಗೆ ನಡೆಯಲಿದೆ. ವೇದಿಕೆ ಕಾರ್ಯಕ್ರಮದಲ್ಲಿ ಅವರ ಜೀವನ ಚರಿತ್ರೆ ಕುರಿತ ಉಪನ್ಯಾಸ ಹಾಗೂ ವಿವಿಧ ಕ್ಷೇತ್ರಗಳ ಸಾಧಕರನ್ನು ಅಭಿನಂದಿಸಲಾಗುವುದು’ ಎಂದು ಹೇಳಿದರು.

ಪುರಸಭೆ ಮಾಜಿ ಸದಸ್ಯರಾದ ಕಿರಣ್ ಶಂಕರ್, ಹಾಡ್ಲಿ ಸುರೇಶ್ ಮಾತನಾಡಿದರು.

ತಾ.ಪಂ.ಮಾಜಿ ಉಪಾಧ್ಯಕ್ಷ ಸಿ.ಮಾಧು ಮಾತನಾಡಿದರು. ತಾಲ್ಲೂಕು ಪಂಚಾಯಿತಿ ಇಒ ಎಚ್.ಜಿ.ಶ್ರೀನಿವಾಸ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಎಸ್.ಸಂತೋಷ್ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಇ.ಉಮಾ, ಪುರಸಭೆ ಮುಖ್ಯಾಧಿಕಾರಿ ಎಂ.ಸಿ.ನಾಗರತ್ನ, ಎಸ್.ಜಯಾನಂದ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-40-494810243

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.