ಮಳವಳ್ಳಿ: ಕುರುಬರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಎಲ್.ಸುರೇಶ್ ಅವರ ಮೇಲೆ ಮಸಿ ಎರಚಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಬಂಡೂರು ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಅಧ್ಯಕ್ಷ ಡಿ.ಎಲ್.ಓಂ ಪ್ರಕಾಶ್ ಆಗ್ರಹಿಸಿದರು.

ಪಟ್ಟಣದ ಕುರುಬರ ಸಂಘದ ಹಾಸ್ಟೆಲ್ ಬಳಿ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿ, ನಮ್ಮ ಸಂಘದ ಅಧ್ಯಕ್ಷರ ಮೇಲೆ ಕಿಡಿಗೇಡಿಗಳು ಮಸಿ ಎರಚಿ ಅವಮಾನಿಸಿರುವುದು ಅಕ್ಷಮ್ಯ ಅಪರಾಧವಾಗಿದ್ದು, ಸಮಾಜದ ಗೌರವಕ್ಕೆ ಧಕ್ಕೆ ತಂದಿರುವ ಇಂಥ ಘಟನೆ ನಡೆಯಬಾರದು. ಸಂಘದಲ್ಲಿ ಭಿನ್ನಾಭಿಪ್ರಾಯಗಳಿದ್ದರೆ ಮಾತುಕತೆಯ ಮೂಲಕ ಬಗೆಹರಿಸಬಹುದಾಗಿತ್ತು, ಆದನ್ನು ಬಿಟ್ಟು ಇಂತಹ ಕೆಲಸ ಮಾಡುವುದು ಸರಿಯಲ್ಲ ಎಂದರು.

ಕುರುಬರ ಸಂಘದ ತಾಲ್ಲೂಕು ಘಟಕದ ಕಾರ್ಯದರ್ಶಿ ಶಿವಣ್ಣ ಮಾತನಾಡಿ, ಎಂ.ಎಲ್.ಸುರೇಶ್ ಅವರು ಸಂಘದ ಅಭಿವೃದ್ಧಿಗಾಗಿ ಸಾಕಷ್ಟು ಶ್ರಮಿಸಿದ್ದಾರೆ. ಜಿಲ್ಲೆಯ ತಾಲ್ಲೂಕುಗಳಲ್ಲಿ ಸಂಘಟನೆ ಬಲಪಡಿಸುತ್ತಿದ್ದಾರೆ. ಇಂತಹ ಘಟನೆ ಸಮಾಜಕ್ಕೆ ಕಳಂಕ ತರುವ ಕೆಲಸವಾಗಿದ್ದು, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಈ ಘಟನೆ ಸಮಾಜದ ಏಕತೆ ಮತ್ತು ಗೌರವಕ್ಕೆ ಧಕ್ಕೆ ತಂದಿದ್ದು, ಮುಂದಿನ ದಿನಗಳಲ್ಲಿ ಇದು ಮರುಕಳಿಸದಂತೆ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಸಂಘದ ವಿಚಾರಗಳನ್ನು ಚರ್ಚೆಯ ಮೂಲಕವೇ ಬಗೆಹರಿಸಬೇಕು ಎಂದು ಹೇಳಿದರು. ತಾಲ್ಲೂಕು ಘಟಕದ ಅಧ್ಯಕ್ಷ ನಾಗರಾಜು, ಖಜಾಂಚಿ ಸುರೇಶ್, ಮುಖಂಡರಾದ ನಿಂಗರಾಜು, ಲಿಂಗರಾಜು, ಕಾಳಿಂಗ, ಪದ್ಮಮ್ಮ, ಕಮಲಮ್ಮ, ರಾಚೇಗೌಡ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-40-1287937574

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.