ಪಾಂಡವಪುರ: ಜಾಗಟೆ ಮಲ್ಲೇನಹಳ್ಳಿ ಗ್ರಾಮದ ಬಳಿ ಯೋಗೇಶ್ ಎಂಬುವರ ಜಮೀನಿನಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಇರಿಸಿದ್ದ ಬೋನಿನಲ್ಲಿ ಮಂಗಳವಾರ ರಾತ್ರಿ ನಾಲ್ಕು ವರ್ಷದ ಗಂಡು ಚಿರತೆ ಸೆರೆ ಸಿಕ್ಕಿದೆ.
ಬುಧವಾರ ಬೆಳಗ್ಗೆ ರೈತ ಯೋಗೇಶ್‌ಗೆ ಚಿರತೆ ಬೋನಿಗೆ ಬಿದ್ದಿರುವ ವಿಚಾರ ತಿಳಿದು ಬಂದಿದೆ. ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿ ಚಿರತೆಯನ್ನು ವಶಕ್ಕೆ ಪಡೆದಿದ್ದಾರೆ. ಚಿರತೆ ಸೆರೆಗೆ ನಾಲ್ಕು ದಿನಗಳ ಹಿಂದೆ ಬೋನು ಇರಿಸಲಾಗಿತ್ತು.
ಚಿರತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ಮಹದೇಶ್ವರಬೆಟ್ಟದ ಅರಣ್ಯ ಪ್ರದೇಶಕ್ಕೆ ಬಿಡಲಾಗುವುದು ಎಂದು ವಲಯ ಅರಣ್ಯಾಧಿಕಾರಿ ಜಗದೀಶ್‌ಗೌಡ ತಿಳಿಸಿದರು.