ಮಳವಳ್ಳಿ: ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗಳಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಜನರಿಗೆ ಅರಿವು ಮಾಡಿಸಿ ಚುನಾವಣೆಗೆ ಸಿದ್ಧತೆ ಆರಂಭಿಸಬೇಕು ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿಯ ಶಾಸಕರ ಕಚೇರಿಯ ಆವರಣದಲ್ಲಿ ಶನಿವಾರ ನಡೆದ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗ್ರಾಮೀಣ ಜನರ ನೆಮ್ಮದಿಗೆ ವರದಾನವಾಗಿರುವ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆ ಹಾಗೂ ತಾಲ್ಲೂಕಿನಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ನಮ್ಮ ಪಕ್ಷದವರು ಕ್ಷೇತ್ರದ ಮತದಾರರಿಗೆ ಮನವರಿಕೆ ಮಾಡಿಕೊಡಬೇಕು. ಆ ಮೂಲಕ ಸ್ಥಳೀಯ ಸಂಸ್ಥೆ ಚುನಾವಣೆಗೆ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯಿತಿ, ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತಿ ಹಾಗೂ ಪುರಸಭೆ ಸೇರಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಎದುರಾಗುತ್ತಿರುವುದರಿಂದ ಈಗಿನಿಂದಲೇ ಒಗ್ಗಟ್ಟಿನಿಂದ ಪಕ್ಷ ಸಂಘಟನೆಗೆ ಮುಂದಾಗಬೇಕು ಎಂದು ಕರೆ ನೀಡಿದರು.

ವೈಯಕ್ತಿಕ ಭಿನ್ನಾಭಿಪ್ರಾಯಗಳನ್ನು ಬಿಟ್ಟು ಪಕ್ಷ ಸಂಘಟನೆಗೆ ಮುಖಂಡರು ಹಾಗೂ ಕಾರ್ಯಕರ್ತರು ಮುಂದಾಗಬೇಕು. ಪ್ರತಿ ಗ್ರಾಮಕ್ಕೆ ತೆರಳಿ ಯುವ ಸಮೂಹವನ್ನು ಸಂಘಟಿಸಿ ಕಾಂಗ್ರೆಸ್ ಪಕ್ಷವನ್ನು ಸದೃಢ ಮಾಡಬೇಕು. ಬೂತ್ ಏಜೆಂಟ್ಗಳು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿರುವವರನ್ನು ಸೇರ್ಪಡೆಗೊಳಿಸಬೇಕು. ಮತದಾರರ ಪಟ್ಟಿಯಲ್ಲಿ ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸಬೇಕು. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮಹಿಳಾ ಮೀಸಲು ಜಾರಿಯಾಗುವುದರಿಂದ ಎಲ್ಲರೂ ಜವಾಬ್ದಾರಿಯುತವಾಗಿ ಕೆಲಸ ಮಾಡಬೇಕು ಎಂದರು.

ತಾಲ್ಲೂಕಿನ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪದವಿ ಕಾಲೇಜು ಕಟ್ಟಡ ನಿರ್ಮಾಣ, ಸರ್ಕಾರಿ ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್, ಹೊಸ ಕೋರ್ಸ್ಗಳ ಆರಂಭ, ಜನರ ಅಲೆದಾಟ ತಪ್ಪಿಸಲು ಎಲ್ಲ ಸರ್ಕಾರಿ ಕಚೇರಿಗಳನ್ನು ಒಳಗೊಂಡ ಪ್ರಜಾಸೌಧ ನಿರ್ಮಾಣ, ರೈತರಿಗಾಗಿ ನಾಲಾ ಆಧುನೀಕರಣ, ಏತ ನೀರಾವರಿ ಅಭಿವೃದ್ಧಿ, ಕಾವೇರಿ ನೀರು ಸೌಲಭ್ಯ ಸೇರಿ ಹಲವಾರು ಯೋಜನೆಗಳನ್ನು ತಾಲ್ಲೂಕಿಗೆ ತಂದಿದ್ದು, ಅಭಿವೃದ್ಧಿಗಾಗಿ ಕಾಂಗ್ರೆಸ್ಗೆ ಮತ ಹಾಕಿ ಎಂದು ಧೈರ್ಯದಿಂದ ಕೇಳುವ ರೀತಿಯಲ್ಲಿ ಕ್ಷೇತ್ರವನ್ನು ಅಭಿವೃದ್ಧಿಪಡಿಸಲಾಗಿದೆ ಎಂದರು.

ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಪಿ.ರಾಜು, ನಗರ ಘಟಕದ ಅಧ್ಯಕ್ಷ ದೊಡ್ಡಯ್ಯ, ಮನ್ಮುಲ್ ನಿರ್ದೇಶಕರಾದ ಡಿ.ಕೃಷ್ಣೇಗೌಡ, ಆರ್.ಎನ್.ವಿಶ್ವಾಸ್, ಟಿಎಪಿಸಿಎಂಎಸ್ ಅಧ್ಯಕ್ಷ ಎಂ.ಲಿಂಗರಾಜು, ನಿರ್ದೇಶಕರಾದ ಕೆ.ಜೆ.ದೇವರಾಜು, ಬಿ.ಪುಟ್ಟಬಸವಯ್ಯ, ದಿಲೀಪ್ ಕುಮಾರ್, ಮಲ್ಲಯ್ಯ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಚಿಕ್ಕಲಿಂಗಯ್ಯ, ತಾಲ್ಲೂಕು ಅಧ್ಯಕ್ಷ ಪಿ.ಮಾದೇಶ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಚಂದ್ರಕುಮಾರ್, ಸುಷ್ಮಾ ರಾಜು, ಕೆಪಿಸಿಸಿ ಸದಸ್ಯರಾದ ಸಿದ್ದೇಗೌಡ, ಪುಟ್ಟಸ್ವಾಮಿ, ಮುಖಂಡರಾದ ಅಮೃತ್ ಕಂಠೇಶ್, ಸಿದ್ದೇಗೌಡ, ಬಂಕ್ ಮಹದೇವು, ವೇದಮೂರ್ತಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.