ಮಳವಳ್ಳಿ: ಟೀಕೆಗಳಿಗೆ ಸಮಯ ವ್ಯರ್ಥ ಮಾಡದೇ, ರಾಜಕೀಯ ಲಾಭಕ್ಕಾಗಿ ಅಧಿಕಾರವನ್ನು ಬಳಸಿಕೊಳ್ಳದೆ, ದೂರದೃಷ್ಟಿಯ ಕಾರ್ಯಕ್ರಮ ಜಾರಿ ಮಾಡಲಾಗುತ್ತಿದೆ ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು.

ಪಟ್ಟಣದ ಮೈಸೂರು ರಸ್ತೆಯ ಪಶ್ಚಿಮ ಬಡಾವಣೆ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಶನಿವಾರ ನೆಸ್ಲೆ ಇಂಡಿಯಾ ಪ್ರೈವೇಟ್ ಲಿಮಿಟೆಡ್ ನ ಸಿಎಸ್ಆರ್ ಅನುದಾನದಡಿ ₹1.30 ಕೋಟಿವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

‘ರಾಜಕೀಯ ಸೋಗಿನಲ್ಲಿರುವ ಕೆಲವು ಸಂಘಟನೆಗಳು ಸರ್ಕಾರಿ ಕಚೇರಿಗಳಿಗೆ ನುಗ್ಗಿ ಅಲ್ಲಿನ ಸಿಬ್ಬಂದಿಯನ್ನು ಪ್ರಶ್ನಿಸಿ ಸರ್ಕಾರ, ಶಾಸಕರು ಹಾಗೂ ಅಧಿಕಾರಿಗಳ ವಿರುದ್ಧ ಏಕವಚನ ಪದ ಬಳಸಿ ನಿಂದಿಸುತ್ತಿರುವ ಬಗ್ಗೆ ಜಿಲ್ಲಾಧಿಕಾರಿಗಳು ಸುಮೋಟೋ ಪ್ರಕರಣ ದಾಖಲಿಸಿ ಕ್ರಮ ವಹಿಸಬೇಕು. ಅಧಿಕಾರಿಗಳು ಭ್ರಷ್ಟಚಾರದಲ್ಲಿ ತೊಡಗಿದ್ದರೇ ಅಥವಾ ಕಚೇರಿಯಲ್ಲಿ ಸರಿಯಾಗಿ ಕೆಲಸ ನಿರ್ವಹಿಸದಿದ್ದರೆ ಮೇಲಾಧಿಕಾರಿಗಳ ಗಮನಕ್ಕೆ ತರಬಹುದು. ಇಲ್ಲವೇ ಲೋಕಾಯುಕ್ತ, ತನಿಖಾ ಸಂಸ್ಥೆ ಹಾಗೂ ಸಕ್ಷಮ ಪ್ರಾಧಿಕಾರಕ್ಕೆ ದೂರು ನೀಡಬಹುದಾಗಿದೆ’ ಎಂದು ಸೂಚಿಸಿದರು.

ಇದಕ್ಕೂ ಮುನ್ನ ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜಿನ ಪ್ರೌಢಶಾಲಾ ವಿಭಾಗಕ್ಕೆ ನೆಸ್ಲೆ ಇಂಡಿಯಾ ಪ್ರೈವೇಟ್ ಲಿಮಿಟೆಡ್ ನಿಂದ ₹1.30 ಕೋಟಿ ವೆಚ್ಚದ ಕಾಮಗಾರಿ ಚಾಲನೆ ನೀಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಇ.ಉಮಾ, ನೆಸ್ಲೆ ಇಂಡಿಯಾ ಪ್ರೈವೇಟ್ ಲಿಮಿಟೆಡ್ ನ ಶ್ರೀನಿವಾಸ್, ಮನ್ ಮುಲ್ ನಿರ್ದೇಶಕ ಆರ್.ಎನ್.ವಿಶ್ವಾಸ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದೊಡ್ಡಯ್ಯ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ತಾಲ್ಲೂಕು ಅಧ್ಯಕ್ಷ ಪಿ.ಮಾದೇಶ್, ಟಿಎಪಿಸಿಎಂಎಸ್ ನಿರ್ದೇಶಕರಾದ ಕೆ.ಜೆ.ದೇವರಾಜು, ದಿಲೀಪ್ ಕುಮಾರ್, ಪುರಸಭೆ ಮಾಜಿ ಸದಸ್ಯ ನೂರುಲ್ಲಾ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.