ಮಳವಳ್ಳಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧ ಕರ್ನಾಟಕ ಕೃಷಿ ಕೂಲಿಕಾರರು ಹಾಗೂ ಗ್ರಾಮೀಣ ಕಾರ್ಮಿಕರ ಸಂಘದ ಸದಸ್ಯರು ತಾಲ್ಲೂಕಿನ ಹಲವು ಗ್ರಾಮ ಪಂಚಾಯಿತಿ ಕಚೇರಿಗಳ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿದರು.

ತಾಲ್ಲೂಕಿನ ಬಂಡೂರು, ತಳಗವಾದಿ ಸೇರಿ ವಿವಿಧ ಗ್ರಾಮ ಪಂಚಾಯಿತಿಗಳ ಮುಂದೆ ಜಮಾಯಿಸಿದ ಸದಸ್ಯರು ಜಿ ರಾಮ್ ಜಿ ಕಾಯ್ದೆಯನ್ನು ಜಾರಿಗೆ ತಂದಿರುವ ಕೇಂದ್ರ ಸರ್ಕಾರ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಘೋಷಣೆಗಳನ್ನು ಕೂಗಿ, ಆಕ್ರೋಶ ವ್ಯಕ್ತಪಡಿಸಿ ಕೂಡಲೇ ಬಾಕಿ ಹಣವನ್ನು ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿದರು.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎಂ.ಶಿವಮಲ್ಲಯ್ಯ ಮಾತನಾಡಿ, ಕೇಂದ್ರ ಸರ್ಕಾರ ಕೃಷಿ ಕೂಲಿಕಾರರನ್ನು ನಿರ್ಲಕ್ಷಿಸಿ ಉದ್ಯಮಿಗಳ ಪರವಾಗಿ ನಿಲ್ಲುವುದರ ಮೂಲಕ ಅವರಿಗೆ ಬೇಕಾದ ಸೌಲಭ್ಯಗಳನ್ನು ನೀಡುತ್ತಿದ್ದಾರೆ. ಬಡವರ ಪರ ಯಾವುದೇ ನಿರ್ಧಾರ ಕೈಗೊಳ್ಳುತ್ತಿಲ್ಲ, ಅಲ್ಲದೇ ಕಳೆದ ಲೋಕಸಭಾ ಚುನಾವಣೆಯಲ್ಲಿ ಜನರ ಮತ ಪಡೆದು ಆಯ್ಕೆಯಾದ ಎಚ್.ಡಿ.ಕುಮಾರಸ್ವಾಮಿ ನರೇಗಾ ಕಾಯ್ದೆಯಲ್ಲಿ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತುತ್ತಿಲ್ಲ, ಮುಂಬರುವ ಚುನಾವಣೆಯಲ್ಲಿ ಇವರಿಗೆ ತಕ್ಕಪಾಠ ಕಲಿಸಬೇಕು ಎಂದರು.

ನರೇಗಾ ಯೋಜನೆಯಲ್ಲಿ ಲೋಪಗಳಿದ್ದರೇ ತಿದ್ದುಪಡಿ ಮಾಡಿ ಅನುಷ್ಠಾನಗೊಳಿಸಿ ಬಡವರ ಪರವಾಗಿರುವ ನರೇಗಾವನ್ನು ಉಳಿಸಬೇಕು. ರಾಜ್ಯ ಸರ್ಕಾರ ಜಿ ರಾಮ್ ಜಿ ಕಾಯ್ದೆಯನ್ನು ಒಪ್ಪದಿರುವುದರಿಂದ ನರೇಗಾದಡಿ 100 ದಿನ ಕೆಲಸವನ್ನು ಕೊಡಲು ನಮೂನೆ 6 ಅನ್ನು ಪಡೆದು ಉದ್ಯೋಗ ಕಲ್ಪಿಸಬೇಕು. ಎನ್ಎಂಎಂಎಸ್ ಕೆವೈಸಿ ಅವೈಜ್ಞಾನಿಕ ತಂತ್ರಜ್ಞಾನವನ್ನು ಅಳವಡಿಸುವುದನ್ನು ಕೈಬಿಟ್ಟು ಸರಳ ರೀತಿಯಲ್ಲಿಯೇ ಕೂಲಿಕಾರರಿಗೆ ಹಾಜರಾತಿ ನಿರ್ವಹಿಸಬೇಕು ಎಂದು ಒತ್ತಾಯಿಸಿದರು.

ತಾಲ್ಲೂಕು ಘಟಕದ ಅಧ್ಯಕ್ಷ ಟಿ.ಎಚ್.ಆನಂದ್ ಮಾತನಾಡಿ, ಕಾಯಕ ಬಂಧುಗಳ ಬಾಕಿ ಪ್ರೋತ್ಸಾಹ ಧನವನ್ನು ಅಂದಿನ ದಿನವೇ ಚುಕ್ತಾ ಮಾಡಬೇಕು. ವೈಯಕ್ತಿಕ ಕಾಮಗಾರಿಗಳ ರೈತ ಮತ್ತು ಕೂಲಿಕಾರರ ಎಲ್ಲ ಬಾಕಿ ಹಣವನ್ನು ಬಿಡುಗಡೆಗೊಳಿಸಬೇಕು. ಬೇಸಿಗೆ ಇರುವುದರಿಂದ ಬೆಳಿಗ್ಗೆ 7ರಿಂದ 11 ಗಂಟೆ ಒಳಗೆ ಕೆಲಸ ನೀಡಬೇಕು. ಬಿಸಿಲಿನ ತಾಪಕ್ಕೆ ಮೃತಪಟ್ಟ ಕೂಲಿಕಾರರಿಗೆ ತಲಾ ₹10 ಲಕ್ಷ ಪರಿಹಾರ ಹಣ ನೀಡಬೇಕು. ದಿನ ಬಳಕೆ ವಸ್ತುಗಳ ಬೆಲೆಗಳು ಹೆಚ್ಚಾಗುತ್ತಿರುವುದರಿಂದ ಕೂಲಿ ದರವನ್ನು ₹700ಕ್ಕೆ ಏರಿಕೆ ಮಾಡಬೇಕು ಎಂದು ಆಗ್ರಹಿಸಿದರು.

ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಮುಖಂಡರಾದ ರಾಮಯ್ಯ, ಬಸವರಾಜು, ಪುಟ್ಟಮಾದೇಗೌಡ, ಮಹದೇವಮ್ಮ, ಗಿರಿದಯ್ಯ, ಕುಮಾರ್, ಶಿವಣ್ಣ, ದೇವರಾಜ್, ಜಯಲಲಿತಾ, ಮಹದೇವು, ಕಾಳಯ್ಯ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-40-988580812

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.