ಮಳವಳ್ಳಿ: ಸಾರ್ವಜನಿಕ ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ಎಲ್ಲ ರೀತಿಯ ಸೌಲಭ್ಯಗಳನ್ನು ಕಲ್ಪಿಸಿ ಗುಣಮಟ್ಟದ ಚಿಕಿತ್ಸೆ ನೀಡಲು ಅಗತ್ಯ ಕ್ರಮ ವಹಿಸಲಾಗಿದೆ ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು.

ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದ ಆವರಣದಲ್ಲಿ ಈಚೆಗೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ತುರ್ತು ಸಂದರ್ಭದಲ್ಲಿ ನೆರವಾಗುವ ನಿಟ್ಟಿನಲ್ಲಿ ಸಿಎಸ್ಆರ್ ಅನುದಾನದಲ್ಲಿ ₹33 ಲಕ್ಷ ವೆಚ್ಚದ ಸುಸಜ್ಜಿತ ತುರ್ತು ಚಿಕಿತ್ಸಾ ವಾಹನ ಹಾಗೂ ರಾಷ್ಟೀಯ ಆರೋಗ್ಯ ಅಭಿಯಾನ ಯೋಜನೆಯಡಿ ಪ್ರಾಥಮಿಕ ಆರೋಗ್ಯ ಸಂಚಾರಿ ತುರ್ತು ಚಿಕಿತ್ಸಾ ವಾಹನಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

‘ಆಸ್ಪತ್ರೆಯಲ್ಲಿ ಉತ್ತಮ ಹೆರಿಗೆ ವಾರ್ಡ್, ನವಜಾತ ಶಿಶುಗಳ ತುರ್ತು ಚಿಕಿತ್ಸಾ ವಿಭಾಗ ಹಾಗೂ ಆಧುನಿಕ ಯಂತ್ರೋಪಕರಣದ ಮೂಲಕ ಶಸ್ತ್ರಚಿಕಿತ್ಸೆಗೆ ಅವಕಾಶ ಕಲ್ಪಿಸಿ ಆಧುನಿಕತೆಗೆ ತಕ್ಕಂತೆ ಡಿಜಿಟಲ್ ಎಕ್ಸ್ರೇ, ಸ್ಕ್ಯಾನಿಂಗ್ ಸೆಂಟರ್ ಆರಂಭಿಸಲಾಗಿದೆ. ಥೈರಾಯ್ಡ್ ಸೇರಿದಂತೆ ನೂರಕ್ಕೂ ಹೆಚ್ಚು ರಕ್ತ ಪರೀಕ್ಷೆಗಳನ್ನು ಒಂದೇ ಸೂರಿನಲ್ಲಿ ಮಾಡಲಾಗುತ್ತಿದೆ. ಡಯಾಲಿಸಿಸಿಸ್ ಯಂತ್ರಗಳನ್ನು ಹೆಚ್ಚಿಸಲಾಗಿದೆ. ಜಿಲ್ಲಾ ಮಟ್ಟದಲ್ಲಿ ನೀಡುವಂತಹ ಆರೋಗ್ಯ ಸೌಲಭ್ಯವನ್ನು ತಾಲ್ಲೂಕಿನಲ್ಲಿಯೇ ನೀಡಲಾಗುತ್ತಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

‘ಖಾಸಗಿ ಆಸ್ಪತ್ರೆಗೂ ಮೀಗಿಲಾಗಿ ಶುಚಿತ್ವ ಕಾಪಾಡಲಾಗುತ್ತಿದೆ. ನುರಿತ ತಜ್ಞ ವೈದ್ಯರು ಉತ್ತಮವಾಗಿ ಸೇವೆ ಸಲ್ಲಿಸುತ್ತಿರುವುದರಿಂದ ಹೊರ ಜಿಲ್ಲೆಗಳಿಂದಲೂ ರೋಗಿಗಳು ಇಲ್ಲಿಗೆ ಬಂದು ಚಿಕಿತ್ಸೆ ಪಡೆಯುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸೌಲಭ್ಯವನ್ನು ನೀಡಲಾಗುವುದು’ ಎಂದು ಭರವಸೆ ನೀಡಿದರು.

ದೂರದ ಗ್ರಾಮಗಳಲ್ಲಿರುವ ರೋಗಿಗಳಿಗೆ ಪ್ರಾಥಮಿಕ ಆರೋಗ್ಯ ಸಂಚಾರಿ ತುರ್ತು ಚಿಕಿತ್ಸಾ ವಾಹನವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಹೇಳಿದರು.

ತಾಲ್ಲೂಕು ವೈದ್ಯಾಧಿಕಾರಿ ಡಾ.ಪಿ.ವೀರಭದ್ರಪ್ಪ, ಸಾರ್ವಜನಿಕ ಆಸ್ಪತ್ರೆಯ ಪ್ರಭಾರ ಆಡಳಿತಾಧಿಕಾರಿ ಡಾ.ಶಿವಸ್ವಾಮಿ, ಮನ್ಮುಲ್ ನಿರ್ದೇಶಕರಾದ ಆರ್.ಎನ್ ವಿಶ್ವಾಸ್, ಡಿ.ಕೃಷ್ಣೇಗೌಡ, ಪ್ರಮುಖರಾದ ಸಿ.ಪಿ.ರಾಜು, ದೊಡ್ಡಯ್ಯ, ಸಿ.ಮಾಧು, ಪಿ.ಮಾದೇಶ್, ಎಂ.ಲಿಂಗರಾಜು, ಕೆ.ಜೆ. ದೇವರಾಜು, ದಿಲೀಪ್ ಕುಮಾರ್(ವಿಶ್ವ) ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-40-158554742

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.