ಮಳವಳ್ಳಿ: ಎತ್ತಿನ ಗಾಡಿ ಓಟ ಗ್ರಾಮೀಣ ಸೊಗಡಿನ ಸಂಸ್ಕೃತಿಯನ್ನು ಬಿಂಬಿಸುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ತಿಳಿಸಿದರು.

ಪಟ್ಟಣದ ಹೊರವಲಯದಲ್ಲಿ ಪೇಟೆ ಒಕ್ಕಲಗೇರಿಯ ನಾಡಪ್ರಭು ಕೆಂಪೇಗೌಡ ಯುವಕರ ಬಳಗ ಆಯೋಜಿಸಿದ್ದ ಮೊದಲ ವರ್ಷದ ರಾಜ್ಯ ಮಟ್ಟದ ಜೋಡಿ ಹಸುಗಳು ಮತ್ತು ಚಕ್ಕಡಿ ಓಟದ ಪಂದ್ಯಾವಳಿಗೆ ಶನಿವಾರ ಚಾಲನೆ ನೀಡಿ ಅವರು ಮಾತನಾಡಿದರು.

‘ರಾಸುಗಳಿಗೂ ಮತ್ತು ರೈತರಿಗೂ ಅವಿನಾವಭಾವ ಸಂಬಂಧವಿದ್ದು, ಇಂಥ ಎತ್ತಿನಗಾಡಿ ಓಟದ ಸ್ಪರ್ಧೆಯಿಂದ ರೈತರಿಗೆ ಮನರಂಜನೆ ಜತೆಗೆ ಕ್ರೀಡಾ ಸ್ಫೂರ್ತಿಯನ್ನು ತುಂಬುತ್ತದೆ. ಹಿಂದೆ ಗ್ರಾಮೀಣ ಪ್ರದೇಶದ ಜನರು ಶುಭ ಸಮಾರಂಭಗಳಿಗೆ ತೆರಳಲು ಎತ್ತಿನ ಗಾಡಿಗಳನ್ನು ಬಳಸುತ್ತಿದ್ದರು. ರೈತರು ಜಾನುವಾರುಗಳೊಂದಿಗೆ ಸಂಬಂಧಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕೃಷಿ ಕ್ಷೇತ್ರದ ಅಭಿವೃದ್ಧಿಗೆ ರಾಸುಗಳ ಪಾತ್ರ ಶ್ಲಾಘನೀಯ’ ಎಂದು ಬಣ್ಣಿಸಿದರು.

‘ಸದಾ ಕೃಷಿ ಚಟುವಟಿಕೆಯಲ್ಲಿ ತೊಡಗುವ ರೈತರು ನಗರ ಪ್ರದೇಶದಲ್ಲಿ ಇಂಥ ಕ್ರೀಡಾಕೂಟಗಳನ್ನು ಹೆಚ್ಚು ಆಯೋಜಿಸುವ ಮೂಲಕ ರಾಸುಗಳು ಮತ್ತು ರೈತರ ನಡುವೆ ಬಾಂಧವ್ಯ ಹೆಚ್ಚಲು ಸಹಕಾರಿಯಾಗಿದೆ. ನಾಡಪ್ರಭು ಕೆಂಪೇಗೌಡ ಯುವಕರ ಬಳಗದವರು ಮೊದಲ ಬಾರಿಗೆ ಎತ್ತಿನಗಾಡಿ ಓಟದ ಸ್ಪರ್ಧೆ ಆಯೋಜಿಸುವ ಮೂಲಕ ಗ್ರಾಮೀಣ ಕ್ರೀಡೆಗೆ ಆದ್ಯತೆ ನೀಡುತ್ತಿರುವುದು ಒಳ್ಳೆಯ ಬೆಳವಣಿಗೆ’ ಎಂದರು.

‘ರೈತರು ಕೃಷಿ ಚಟುವಟಿಕೆ ಜೊತೆಗೆ ಮನರಂಜನೆಗೂ ಜಾನುವಾರುಗಳನ್ನು ಬಳಸುತ್ತಿರುವುದು ಉತ್ತಮ ಬೆಳವಣಿಗೆ. ಮುಂದಿನ ದಿನಗಳಲ್ಲಿ ಇಂತಹ ಸ್ಪರ್ಧೆಗಳಿಗೆ ಉತ್ತೇಜನ ನೀಡಬೇಕು. ಹಲವು ಸಮಸ್ಯೆಗಳಿಂದ ಕೃಷಿ ಚಟುವಟಿಕೆಗಳಿಂದ ರೈತರು ವಿಮುಖವಾಗುತ್ತಿರುವ ಸಂದರ್ಭದಲ್ಲಿ ಯುವ ಸಮೂಹ ಕೃಷಿಯತ್ತ ಚಿಂತನೆ ನಡೆಸಬೇಕು. ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರು ಸಾವಿರಾರು ಕೋಟಿ ಅನುದಾನ ತಂದು ಮಳವಳ್ಳಿಯ ಸಮಗ್ರ ಅಭಿವೃದ್ಧಿಗೆ ಮುಂದಾಗಿದ್ದಾರೆ. ನಮ್ಮ ಸರ್ಕಾರದ ಹಲವಾರು ಯೋಜನೆಗಳು ಬಡವರ ಕೈಹಿಡಿಯುತ್ತಿವೆ’ ಎಂದು ಹೇಳಿದರು.

ತಾಲ್ಲೂಕು ಪಂಚಾಯಿತಿ ಇಒ ಎಚ್.ಜಿ.ಶ್ರೀನಿವಾಸ್, ಮನ್ಮುಲ್ ನಿರ್ದೇಶಕ ಡಿ.ಕೃಷ್ಣೇಗೌಡ, ಟಿಎಪಿಸಿಎಂಎಸ್ ನಿರ್ದೇಶಕ ಕೆ.ಜೆ.ದೇವರಾಜು, ಯುವ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಕೆ.ಎಸ್. ಕೀರ್ತನ್ ಕುಮಾರ್, ಮುಖಂಡ ಬಸವರಾಜು ಹಾಗೂ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-40-1460103809

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.