ಮಳವಳ್ಳಿ: ತಾಲ್ಲೂಕಿನ ವಿವಿಧೆಡೆ ಪ್ರಗತಿಯಲ್ಲಿ ಇರುವ ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಮುಗಿಸುವಂತೆ ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿ ಎಸ್.ಧನುಷ್ ಸೂಚನೆ ನೀಡಿದರು.

ಪಟ್ಟಣದಲ್ಲಿ ಶನಿವಾರ ನಡೆದ ತಾಲ್ಲೂಕು ಪಂಚಾಯಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮೇ ತಿಂಗಳು ಮುಗಿಯುತ್ತಿದ್ದು, ಯಾವುದೇ ಕೆಲಸ ಬಾಕಿ ಉಳಿಯಬಾರದು, ವಿವಿಧ ಇಲಾಖೆಗಳಿಂದ ಬಿಡುಗಡೆಯಾಗಿರುವ ಅನುದಾನ ವಾಪಸ್ ಹೋಗದಂತೆ ಕೆಲಸ ಮಾಡಬೇಕು. ಜನರಿಗೆ ಕುಡಿಯುವ ನೀರು, ರಸ್ತೆ, ಸ್ವಚ್ಛತೆ, ಮೂಲ ಸೌಕರ್ಯಗಳ ಕೊರತೆ ಆದಂತೆ ಎಚ್ಚರ ವಹಿಸಲು ಸೂಚನೆ ನೀಡಿದರು.

ಜನರಿಗೆ ಶುದ್ಧ ಕುಡಿಯುವ ನೀರಿಗಾಗಿ ಟ್ಟು ನಿಂತಿರುವ ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿ ಪೂರ್ಣಗೊಳಿಸಬೇಕು. ಹಸ್ತಾಂತರ ಮಾಡಿರುವ ಘಟಕಗಳ ನಿರ್ವಹಣೆಯನ್ನು ಗ್ರಾಮ ಪಂಚಾಯಿತಿ ಮಾಡಬೇಕು. ನರೇಗಾ ಅನುದಾನದ ಕಾಯಗಾರಿಯನ್ನು ಶೀಘ್ರ ಪೂರ್ಣಗೊಳಿಸಬೇಕು ಎಂದು ಹೇಳಿದರು.

ಬಾಡಿಗೆ ಕಟ್ಟಡದಲ್ಲಿ ಇರುವ ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡ ನಿರ್ಮಿಸಲು ಬೇಕಾದ ಕ್ರಮ ವಹಿಸಿ, ಸರ್ಕಾರಿ ಜಾಗಗಳನ್ನು ಗುರುತು ಮಾಡಬೇಕು. ಲಭ್ಯವಿರುವ ಅನುದಾನದೊಂದಿಗೆ ಕಟ್ಟಡ ನಿರ್ಮಾಣಕ್ಕೆ ಸೂಚನೆ ನೀಡಿದ ಅವರು ಕೂನ್ನಾಪುರದಲ್ಲಿ ಪೂರ್ಣಗೊಂಡಿರುವ ಅಂಗನವಾಡಿ ಕೇಂದ್ರ ಉದ್ಘಾಟನೆಗೆ ಇರುವ ಕಾನೂನು ತೊಡಕು ನಿವಾರಿಸಬೇಕು ಎಂದರು.

ತೋಟಗಾರಿಕೆ ಮತ್ತು ಕೃಷಿ ಇಲಾಖೆಯಿಂದ ರೈತರಿಗೆ ಅಗತ್ಯ ಇರುವ ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆಗೆ ಕ್ರಮ ವಹಿಸಬೇಕು. ಜೆಜೆಎಂ ಯೋಜನೆಯಡಿ ಮನೆಗಳಿಗೆ ನೀರು ತಪ್ಪದಂತೆ ಜಾಗೃತಿ ವಹಿಸಬೇಕು ಎಂದರು.

ಗ್ರಾಮೀಣ ಕುಡಿಯುವ ನೀರು ಮತ್ತು ನೈಮರ್ಲ ಇಲಾಖೆಯ ಸಹಾಯಕ ನಿರ್ದೇಶಕ ರಂಗಸ್ವಾಮಿ ಮಾತನಾಡಿ, ಕುಡಿಯುವ ನೀರಿಗೆ ತೊಂದರೆಯಾಗದಂತೆ 36 ಗ್ರಾಮಗಳಲ್ಲಿ ಖಾಸಗಿ ಬೋರ್ವೆಲ್ಗಳಿಂದ ನೀರು ಪಡೆಯಲು ಗುರುತಿಸಲಾಗಿದೆ. ನಾಲ್ಕು ಗ್ರಾಮಗಳಲ್ಲಿ ಖಾಸಗಿಯಾಗಿ ನೀರು ಪಡೆಯಲಾಗುತ್ತಿದೆ. ಜೆಜೆಎಂ ಕಾಮಗಾರಿಯ ಕೆಲಸ ಪ್ರಗತಿಯಲ್ಲಿದೆ ಎಂದು ಮಾಹಿತಿ ನೀಡಿದರು.

ತಾಲ್ಲೂಕು ಪಂಚಾಯಿತಿ ಇಒ ಎಚ್.ಜಿ.ಶ್ರೀನಿವಾಸ್ ಮಾತನಾಡಿ, ವಿವಿಧೆಡೆ ಶಿಥಿಲವಾಗಿರುವ ಕುಡಿಯುವ ನೀರಿನ ಟ್ಯಾಂಕ್ ತೆರವಿಗೆ ಮುಂದಾಗಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಯೋಜನಾಧಿಕಾರಿ ದೀಪು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-40-580717223

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.