ಮಳವಳ್ಳಿ: ಅಸ್ಪೃಶ್ಯತೆಯಿಂದ ತೊಂದರೆಗೆ ಒಳಗಾದವರು ಹಾಗೂ ದೇವಸ್ಥಾನಗಳಿಗೆ ಪ್ರವೇಶ ಸಿಗದ ಘಟನೆಗಳು ಕಂಡುಬಂದರೆ ಪೊಲೀಸ್ ಇಲಾಖೆಯ ಗಮನಕ್ಕೆ ತಂದರೆ ಕೂಡಲೇ ಸಮಸ್ಯೆ ಬಗೆಹರಿಸಲಾಗುವುದು ಎಂದು ಡಿವೈಎಸ್ಪಿ ಎಸ್.ಬಿ.ಯಶವಂತ ಕುಮಾರ್ ತಿಳಿಸಿದರು.

ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಶುಕ್ರವಾರ ಪೊಲೀಸ್ ಇಲಾಖೆಯ ವತಿಯಿಂದ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಂದು ಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗ್ರಾಮೀಣ ಪ್ರದೇಶದಲ್ಲಿನ ಅಸ್ಪೃಶ್ಯತೆ ಆಚರಣೆ ಸಂಬಂಧ ನಿರ್ದಿಷ್ಟವಾದ ದೂರು ಸಲ್ಲಿಸಿದರೇ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಹಳ್ಳಿಗಳಲ್ಲಿರುವ ಹೋಟೇಲ್, ಸೇವಿಂಗ್ ಶಾಪ್, ದೇವಸ್ಥಾನ ಸೇರಿ ಇತರೆ ಸ್ಥಳಗಳಲ್ಲಿ ಅಸ್ಪೃಶ್ಯತೆ ನಿಷೇಧಿಸಲಾಗಿದ್ದು, ಸಾರ್ವಜನಿಕರು ಸಮಾನತೆಯಿಂದ ಬದುಕಬೇಕು ಎಂದು ಸಲಹೆ ನೀಡಿದರು.

ಅಗಸನಪುರ ಗ್ರಾ.ಪಂ.ಮಾಜಿ ಅಧ್ಯಕ್ಷೆ ಯಶೋಧ ಮಾತನಾಡಿ, ನಮ್ಮೂರಿನ ಸ್ಮಶಾನದಲ್ಲಿರುವ ಮರಗಳನ್ನು ಖಾಸಗಿ ವ್ಯಕ್ತಿಯೊಬ್ಬ ಕಡಿದು ಮಾರಾಟ ಮಾಡುತ್ತಿರುವ ಬಗ್ಗೆ ದೂರು ಸಲ್ಲಿಸಿದರೂ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದರು.

ಹಲಗೂರು ಸಿಪಿಐ ಬಿ.ಎಸ್.ಶ್ರೀಧರ್ ಮಾತನಾಡಿ, ಮತ್ತೊಮ್ಮೆ ದೂರು ನೀಡಿ ನಾವು ಕ್ರಮ ಕೈಗೊಳ್ಳುತ್ತೇವೆ ಎಂದರು.

ಸಿಪಿಐ ಜಯಾನಂದ್, ಪಿಎಸ್ಐಗಳಾದ ಪ್ರಕಾಶ್, ಶಿವಲಿಂಗ ದಳವಾಯಿ, ಲೋಕೇಶ್ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-40-1609746892

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.