ಮಳವಳ್ಳಿ: ಸಂವಿಧಾನ ಪ್ರಜೆಗಳಿಗೆ ಮತದಾನದ ಹಕ್ಕನ್ನು ನೀಡಿದೆ. ಭವಿಷ್ಯದ ಪ್ರಜೆಗಳಾದ ಯುವ ಸಮೂಹ ಮತದಾನ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಸುಭದ್ರ ಹಾಗೂ ಸದೃಢ ರಾಷ್ಟ್ರ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಜೆಎಂಎಫ್ಸಿ ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಮಹೇಂದ್ರ ಸಲಹೆ ನೀಡಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ರಾಷ್ಟ್ರೀಯ ಯುವ ಹಾಗೂ ರಾಷ್ಟ್ರೀಯ ಮತದಾರರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಪ್ರತಿಯೊಬ್ಬರೂ ಮುಕ್ತ ಮತ್ತು ನ್ಯಾಯಸಮ್ಮತವಾದ ಮತದಾನದ ಮೂಲಕ ಯಾವುದೇ ಅಮಿಷಕ್ಕೆ ಒಳಗಾಗದೇ ಜಾತಿ, ಧರ್ಮ, ಜನಾಂಗ, ಭಾಷೆ ಮೀರಿ ಮತ ಚಲಾಯಿಸಬೇಕು ಎಂದು ಮನವಿ ಮಾಡಿದರು.

ತಹಶೀಲ್ದಾರ್ ಎಸ್.ವಿ.ಲೋಕೇಶ್ ಮಾತನಾಡಿ, ‘ಮತದಾನ ಪಟ್ಟಿಯಲ್ಲಿ 18 ವರ್ಷ ತುಂಬಿದ ಎಲ್ಲರೂ ನೋಂದಣಿ ಮಾಡಿಸಿಕೊಳ್ಳಬೇಕು. ಪ್ರಜ್ಞಾವಂತ ನಾಗರಿಕರು ಪ್ರಜಾಪ್ರಭುತ್ವದಲ್ಲಿ ನಮ್ಮ ಮತ, ನಮ್ಮ ಹಕ್ಕು ಎಂದು ಭಾವಿಸುವವರೆಗೆ ಮತದಾನ ಪರಿಪೂರ್ಣವಾಗುವುದಿಲ್ಲ’ ಎಂದು ಹೇಳಿದರು.

ಡಿವೈಎಸ್ಪಿ ಎಸ್.ಬಿ.ಯಶವಂತ ಕುಮಾರ್, ತಾಲ್ಲೂಕು ಪಂಚಾಯಿತಿ ಇಒ ಎಚ್.ಜಿ. ಶ್ರೀನಿವಾಸ್, ಪುರಸಭೆ ಮುಖ್ಯಾಧಿಕಾರಿ ಎಂ.ಸಿ.ನಾಗರತ್ನಾ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ನಂಜಮಣಿ, ಕ್ಷೇತ್ರ ಸಮನ್ವಯಾಧಿಕಾರಿ ಎಂ.ಕೆ.ಶ್ರೀನಿವಾಸ್, ವಕೀಲ ಶ್ರೀಕಂಠಸ್ವಾಮಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.