ಮಳವಳ್ಳಿ: ಪಟ್ಟಣದಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಮಹಿಳೆಯರಿಂದ ಚಿನ್ನದ ಸರಗಳನ್ನು ಕಳ್ಳತನ ಮಾಡಲಾಗಿದೆ. ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಬಸ್ ಹತ್ತುವ ವೇಳೆ ನೂಕುನುಗ್ಗಲಿನಲ್ಲಿ ತಿ.ನರಸೀಪುರ ತಾಲ್ಲೂಕಿನ ಸೇನಾಪತಿಹಳ್ಳಿ ಗ್ರಾಮದ ಜಯಮ್ಮ ಅವರ ಸರವನ್ನು ಕಳ್ಳರು ಕಳ್ಳತನ ಮಾಡಿದ್ದಾರೆ.

ಭಾನುವಾರ ಮಹದೇಶ್ವರ ಬೆಟ್ಟಕ್ಕೆ ಹೋಗಲು ಬನ್ನೂರಿನಿಂದ ಕೆಎಸ್ಆರ್ಟಿಸಿ ಬಸ್ನಲ್ಲಿ ಮಳವಳ್ಳಿಯ ನಿಲ್ದಾಣಕ್ಕೆ ಬಂದು ದೇವಸ್ಥಾನಕ್ಕೆ ಹೋಗಲು ಮತ್ತೊಂದು ಬಸ್ ಹತ್ತುವ ವೇಳೆ ದುಷ್ಕರ್ಮಿಗಳು ಕುತ್ತಿಗೆಯಲ್ಲಿದ್ದ 25 ಗ್ರಾಂ.ತೂಕದ ಸರವನ್ನು ಕಸಿದು ಪರಾರಿಯಾಗಿದ್ದಾರೆ. ಸ್ಪಲ್ಪ ದೂರದ ನಂತರ ಮಹಿಳೆ ಸರ ಇಲ್ಲದನ್ನು ಗಮನಿಸಿದ್ದಾರೆ. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಳವಳ್ಳಿ ಪಟ್ಟಣದ ಹೊರವಲಯದ ಬೀರೇಶ್ವರಸ್ವಾಮಿ ದೇವಸ್ಥಾನಕ್ಕೆ ಬಂದಿದ್ದ ಕೊಳ್ಳೇಗಾಲ ತಾಲ್ಲೂಕಿನ ಉಗನಿಯ ಗ್ರಾಮದ ಸುಂದ್ರಮ್ಮ ಅವರ 40 ಗ್ರಾಂ. ತೂಕದ ಚಿನ್ನದ ಸರ ಕಳವು ಮಾಡಲಾಗಿದೆ.

ಸಂಬಂಧಿಕರ ಪೂಜಾ ಕಾರ್ಯಕ್ರಮ ಹಿನ್ನೆಲೆಯಲ್ಲಿ ಗ್ರಾಮದಿಂದ ಮಾರೇಹಳ್ಳಿ ಬೀರೇಶ್ವರ ದೇವಸ್ಥಾನಕ್ಕೆ ಸೋಮವಾರ ಬಂದಿದ್ದ ಮಹಿಳೆ ಕಾರ್ಯಕ್ರಮ ಮುಗಿಸಿಕೊಂಡು ಊರಿಗೆ ತೆರಳಲು ಪಟ್ಟಣದ ಬಸ್ ನಿಲ್ದಾಣಕ್ಕೆ ಬಂದಿದ್ದಾರೆ. ಈ ಸಂಬಂಧ ಪಟ್ಟಣದ ಪೊಲೀಸರು ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದ್ದಾರೆ. ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-40-376148997

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.