ಮಳವಳ್ಳಿ:‘ನಿರ್ದಿಷ್ಟ ರೂಪವಿಲ್ಲದೇ ಸರ್ವವ್ಯಾಪ್ತಿಯಲ್ಲಿ ನೆಲೆಸಿ, ಸಕಲ ಶಕ್ತಿಯನ್ನು ಹೊಂದಿರುವ ದೇವರನ್ನು ಪೂಜಿಸಿದರೇ ಜೀವನದಲ್ಲಿ ನೆಮ್ಮದಿ ಕಾಣಬಹುದಾಗಿದೆ. ವಿಜ್ಞಾನ ತಂತ್ರಜ್ಞಾನ ಯುಗದಲ್ಲೂ ಯುವಸಮೂಹ ಕೈಗೆತ್ತಿಕೊಂಡ ಆಧ್ಯಾತ್ಮಿಕ ಕಾರ್ಯ ಮೆಚ್ಚು ವಂತದ್ದು’ ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು.

ತಾಲ್ಲೂಕಿನ ಅಮೃತೇಶ್ವರನಹಳ್ಳಿ ಕಾಲೊನಿಯಲ್ಲಿ ಮಹಾಗಣಪತಿ ಸೇವಾ ಸಮಿತಿ ವತಿಯಿಂದ ಜೀರ್ಣೋದ್ಧಾರಗೊಳಿಸಿರುವ ಮಹಾಗಣಪತಿ ದೇವಾಲಯದ ಪುನರ್ ಪ್ರತಿಷ್ಠಾಪನೆ ಮತ್ತು ವಿಮಾನ ಗೋಪುರ ಉದ್ಘಾಟನೆ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ಜೆಡಿಎಸ್ ಯುವ ಘಟಕದ ರಾಜ್ಯ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮಾತನಾಡಿ, ‘ನಮ್ಮ ದೇಶವು ವೈಜ್ಞಾನಿಕವಾಗಿ ಎಷ್ಟೇ ಮುಂದುವರೆದರೂ ಭವಿಷ್ಯದ ಪೀಳಿಗೆಗೆ ಇರಬೇಕಾದ ಧಾರ್ಮಿಕ ಪ್ರಜ್ಞೆ, ಸಂಸ್ಕೃತಿ, ಪರಂಪರೆಯನ್ನು ಪೂರ್ವಜರ ಹಾದಿಯಲ್ಲಿಯೇ ಯುವ ಪೀಳಿಗೆ ಮುಂದುವರೆಸಿಕೊಂಡು ಹೋಗುತ್ತಿರುವುದು ಉತ್ತಮ ಸಮಾಜ ನಿರ್ಮಾಣಕ್ಕೆ ಸಾಕ್ಷಿಯಾಗಿದೆ’ ಎಂದರು. ಮತ್ತಿತಾಳೇಶ್ವರ ಸ್ವಾಮಿಯ ಬಸವಪ್ಪ ನೇತೃತ್ವದಲ್ಲಿ ಸೋಮವಾರ ಬೆಳಿಗ್ಗೆ ಶಿಖರ ಕಳಸ ಪ್ರತಿಷ್ಠಾಪನೆ, ಕುಂಭಾಭಿಷೇಕ, ನೇತ್ರೋನ್ಮಿಲನ, ನವಗ್ರಹ ಹೋಮ, ವಾಸ್ತು ಹೋಮ, ಪ್ರಧಾನ ಹೋಮ, ಪೂರ್ಣಹುತಿ, ಮಹಮಂಗಳಾರತಿ, ತೀರ್ಥಪ್ರಸಾದ ವಿನಿಯೋಗದ ಪೂಜಾ ಕಾರ್ಯಕ್ರಮವು ಅಂಚೆದೊಡ್ಡಿಯ ಗುರುಮಠದ ಎಸ್.ನಾಗಭೂಷಣಾರಾದ್ಯ ಅವರ ನೇತೃತ್ವದಲ್ಲಿ ನಡೆಯಿತು.

ಡಿ.ಹಲಸಹಳ್ಳಿ ಗವಿಮಠದ ಷಡಕ್ಷರಿ ಸ್ವಾಮೀಜಿ, ಪುರಸಭೆ ಮಾಜಿ ಅಧ್ಯಕ್ಷ ಎಂ.ಎಚ್.ಕೆಂಪಯ್ಯ, ಮಾಜಿ ಉಪಾಧ್ಯಕ್ಷ ಟಿ.ನಂದಕುಮಾರ್, ಜೆಡಿಎಸ್ ಮುಖಂಡ ಎಂ.ಪಿ.ಮಧು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-40-936757766

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.