ಗುರುವಾರ, 19 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Published : 12 ಆಗಸ್ಟ್ 2024, 16:16 IST
Last Updated : 12 ಆಗಸ್ಟ್ 2024, 16:16 IST
ಫಾಲೋ ಮಾಡಿ
Comments

ಶ್ರೀರಂಗಪಟ್ಟಣ: ಹೊಟ್ಟೆ ನೋವು ತಾಳಲಾರದೆ ವಿಷ ಸೇವಿಸಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವ ಘಟನೆ ತಾಲ್ಲೂಕಿನ ನೇರಲಕೆರೆ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ.

ಗ್ರಾಮದ ಚಿಕ್ಕಮಾದೇಗೌಡ ಅವರ ಮಗ ರಂಗಸ್ವಾಮಿ (45) ಸಾವನ್ನಪ್ಪಿದ್ದಾರೆ. ಭಾನುವಾರ ರಾತ್ರಿ ವಿಷ ಸೇವಿಸಿ ಅಸ್ವಸ್ಥರಾಗಿದ್ದ ರಂಗಸ್ವಾಮಿ ಅವರನ್ನು ಮೈಸೂರಿನ ಕೆ.ಆರ್‌ ಆಸ್ಪತ್ರೆಗೆ ಸೇರಿಸಿದ್ದು ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಪ್ರಕರಣ ದಾಖಲಿಸಿಕೊಂಡಿರುವ ಅರಕೆರೆ ಠಾಣೆ ಪೊಲೀಸರು ತಿಳಿಸಿದ್ದಾರೆ.

ರಂಗಸ್ವಾಮಿ ಅವರಿಗೆ ಪತ್ನಿ, ಇಬ್ಬರು ಪುತ್ರಿಯರು ಹಾಗೂ ಪುತ್ರ ಇದ್ದಾರೆ. ಸೋಮವಾರ ಸಂಜೆ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಿತು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT