ಭಾನುವಾರ, 15 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಂಡ್ಯ: ಗ್ರಾ.ಪಂ ಕಟ್ಟಡಕ್ಕೆ ದೀಪಾಲಂಕಾರ ವೇಳೆ ವಿದ್ಯುತ್ ತಗುಲಿ ವ್ಯಕ್ತಿ ಸಾವು

Published : 14 ಆಗಸ್ಟ್ 2024, 16:13 IST
Last Updated : 14 ಆಗಸ್ಟ್ 2024, 16:13 IST
ಫಾಲೋ ಮಾಡಿ
Comments

ಮೇಲುಕೋಟೆ: ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಬುಧವಾರ ತಾಲ್ಲೂಕಿನ ಹಳೆಬೀಡು ಗ್ರಾಮ ಪಂಚಾಯಿತಿ ಕಚೇರಿ ಕಟ್ಟಡಕ್ಕೆ ದೀಪಾಲಂಕಾರಕ್ಕೆ ಸಿದ್ಧತೆ ಮಾಡುವ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಒಬ್ಬ ಮೃತಪಟ್ಟಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ.

ಪಂಚಾಯಿತಿ ವಾಟರ್ ಮ್ಯಾನ್‌ ವೆಂಕಟೇಶ್ (41) ಮೃತರು. ಮತ್ತೋರ್ವ ಲೋಕೇಶ್ (38) ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ತಕ್ಷಣ ಚಿಕಿತ್ಸೆಗಾಗಿ ಪಾಂಡವಪುರದ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ  ವೆಂಕಟೇಶ್ ಚಿಕಿತ್ಸೆಗೆ ಸ್ಪಂದಿಸಿಲ್ಲ. ಮತ್ತೋರ್ವ ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸಂಬಂಧ ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT