ಹಲಗೂರು (ಮಂಡ್ಯ ಜಿಲ್ಲೆ): ಸಮೀಪದ ಮುತ್ತತ್ತಿಯಲ್ಲಿ ಕಾವೇರಿ ನದಿಯಲ್ಲಿ ಶನಿವಾರ ನೀರಿನ ಸೆಳೆತಕ್ಕೆ ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟರು.

ಮೃತರನ್ನು ಬೆಂಗಳೂರಿನ ಪಾಪಯ್ಯ ಗಾರ್ಡನ್ ನಿವಾಸಿ ಆರ್. ವಿಜಯ್ ಕುಮಾರ್ ಅವರ ಪುತ್ರ ಭಾರ್ಗವ್ (22) ಎಂದು ಗುರುತಿಸಲಾಗಿದೆ.

ಬೆಂಗಳೂರಿನ ಬನಶಂಕರಿಯ ಖಾಸಗಿ ಶಾಲೆಯಲ್ಲಿ ಬಸ್ ಚಾಲಕನಾಗಿದ್ದ ಭಾರ್ಗವ್, ಶನಿವಾರ ಎಂಟು ಮಂದಿ ಸ್ನೇಹಿತರೊಂದಿಗೆ ಆಟೊರಿಕ್ಷಾ ಮತ್ತು ಕಾರಿನಲ್ಲಿ ಮುತ್ತತ್ತಿ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಪ್ರವಾಸ ಬಂದಿದ್ದರು. ಊಟ ಮುಗಿಸಿ ಕಾವೇರಿ ನದಿಯಲ್ಲಿ ಈಜಲು ಹೋದಾಗ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿ ಹೋದರು. ಸ್ಥಳೀಯ ಈಜುಗಾರರ ಸಹಾಯದಿಂದ ಮೃತದೇಹವನ್ನು ಭಾನುವಾರ ಮಧ್ಯಾಹ್ನ ನದಿಯಿಂದ ಹೊರತೆಗೆಯಲಾಯಿತು.

ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.